ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕನ್ನಡ ನಾಮಫಲಕ ಕಡ್ಡಾಯವಾಗಲಿ: ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ

ಅನ್ಯಭಾಷೆ ನಾಮಫಲಕಗಳ ವಿರುದ್ಧ ಕಠಿಣ ನಿಲುವು: ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಎಚ್ಚರಿಕೆ
Published 21 ಮೇ 2024, 16:25 IST
Last Updated 21 ಮೇ 2024, 16:25 IST
ಅಕ್ಷರ ಗಾತ್ರ

ಉಡುಪಿ: ಎಲ್ಲ ಅಂಗಡಿ ಮುಂಗಟ್ಟುಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ಕಡ್ಡಾಯವಾಗಿ ಕನ್ನಡದ ನಾಮಫಲಕಗಳನ್ನು ನಿಯಮಗಳ ಪ್ರಕಾರ ದೊಡ್ಡ ಅಕ್ಷರಗಳಲ್ಲಿ ಹಾಕಬೇಕು. ಈ ಸಂಬಂಧ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ನಾಮಫಲಕಗಳನ್ನು ಹಾಕದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅನ್ಯಭಾಷೆಯ ನಾಮಫಲಕಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಎಲ್ಲ ವ್ಯಾಪಾರಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ನೋಟಿಸ್‌ ನೀಡಲಾಗಿದೆ. ಸರ್ಕಾರದ ನಿಯಮ ಪಾಲನೆ ಮಾಡದಿದ್ದರೆ ದಂಡ ವಿಧಿಸಲಾಗುವುದು. ಕನ್ನಡ ನಾಮಫಲಕ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಸಮಯಾವಕಾಶ ಬೇಕಾಗಲಿದೆ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಸುಜಯ್‌ ಪೂಜಾರಿ, ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯ ನಿಯಮ ಅನುಷ್ಠಾನಗೊಂಡಿಲ್ಲ. ಅಧಿಕಾರಿಗಳು ವಿಳಂಬ ಧೋರಣೆ ತಳೆದಿದ್ದಾರೆ. ನಗರಸಭೆ ಕನ್ನಡ ನಾಮಫಲಕ ಹಾಕಿಸದಿದ್ದರೆ, ಮುಂದಿನ ದಿನಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗದಿದ್ದಲ್ಲಿ ಕಠಿಣ ಕ್ರಮ ಕರವೇ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಸಿದರು.

ಕರವೇ ಜಿಲ್ಲಾ ಸಲಹೆಗಾರ ಪ್ರಕಾಶ್ ದೇವಾಡಿಗ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ್ ದೊರೆ, ಜಿಲ್ಲಾ ಸಹ ಸಾಂಸ್ಕೃತಿಕ ಕಾರ್ಯದರ್ಶಿ ರಾಜಕುಮಾರ್, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಆಶಾ, ಕಾಪು ತಾಲ್ಲೂಕು ಮಹಿಳಾ ಅಧ್ಯಕ್ಷೆ ಶಶಿಕಲಾ ನವೀನ್, ಕಾಪು ತಾಲ್ಲೂಕು ಮಹಿಳಾ ಉಪಾಧ್ಯಕ್ಷೆ ಶಾಲಿನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT