ಕಾಪು (ಪಡುಬಿದ್ರಿ): ಬೆಳಪು ಗ್ರಾಮದ ಮಲಂಗೋಳಿ ಎಂಬಲ್ಲಿ ಮಳೆಗೆ ಶೋಭಾ ಪೂಜಾರ್ತಿ ಅವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಇದ್ದಕ್ಕಿದ್ದಂತೆ ಕುಸಿದಿದೆ. ಮಂಚದ ಮೇಲೆ ಮಲಗಿದ್ದ ಶೋಭಾ ಪೂಜಾರ್ತಿ (55) ಅವರ ಮೇಲೆ ಕಲ್ಲು ಮಣ್ಣು ಬಿದ್ದು ಸಂಪೂರ್ಣ ಮುಚ್ಚಿ ಹೋಗಿದ್ದಾರೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಅಪ್ಪ, ಮಗಳಿಗೆ ಎಚ್ಚರವಾಗಿದೆ. ಸ್ಥಳೀಯರು ಅವಶೇಷಗಳಡಿ ಇದ್ದ ಶೋಭಾ ಅವರನ್ನು ಹೊರಕ್ಕೆಳೆದು ನೀರು ಕುಡಿಸಿ ಆರೈಕೆ ಮಾಡಿದ್ದಾರೆ.

ತಹಶೀಲ್ದಾರ್ ಡಾ.ಪ್ರತಿಭಾ ಆರ್ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಕಂದಾಯ ಇನ್ಸ್ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮ ಆಡಳಿತಾಧಿಕಾರಿ ಲೋಕನಾಥ್, ಗ್ರಾಮ ಪಂಚಾಯತಿ ಸದಸ್ಯರು ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.