ಕಾಪು (ಪಡುಬಿದ್ರಿ): ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಲಾಯಿತು

ಕಾಪು ಪೇಟೆಯಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಘೋಷಣೆ ಕೂಗಿದ ಆಕ್ರೋಶ ವ್ಯಕ್ತಪಡಿಸಿದರು. ದಿಢೀರ್ ರಸ್ತೆ ತಡೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಕಾರ್ಯಕರ್ತರ ಮನವೊಲಿಸಿ ರಸ್ತೆ ತಡೆ ತೆರವುಗೊಳಿಸಿದರು. ಇದರಿಂದ ಕೆಲ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಬಳಿಕ ಮಾತನಾಡಿದ ವಿನಯ ಕುಮಾರ್ ಸೊರಕೆ, ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಜವಾಬ್ದಾರಿಯನ್ನು ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಸರ್ಕಾರ ತಂದ ಸಿಇಟಿ ವ್ಯವಸ್ಥೆಯನ್ನು ಮರಳಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಎಸ್ಐಆರ್ ಮೂಲಕ ಬಡವರ ಮತ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಜನರು ಜಾಗೃತಿಗೊಳ್ಳಬೇಕಾದ ಅಗತ್ಯವಿದೆ. ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಯತ್ನ ನಡೆಸಿತು ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ, ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವುದು ಯುವಕರ ಜವಾಬ್ದಾರಿಯಾಗಿದ್ದು, ಜನಸಾಮಾನ್ಯರ ಸಮಸ್ಯೆಗಳ ಕುರಿತು ಕಾಂಗ್ರೆಸ್ ಪಕ್ಷ ಸದಾ ಧ್ವನಿಯಾಗಲಿದೆ ಎಂದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುಮಾರ್ ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಬೆಲೆ ಏರಿಕೆ, ಎಸ್ಐಆರ್, ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಎನ್.ಎಸ್.ಯು.ಐ ಜಿಲ್ಲಾ ಘಟಕದ ಅಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಜೆ.ಶೆಟ್ಟಿ, ಕಾಪು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಯುವಕಾಂಗ್ರೆಸ್ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ನಿಯಾಝ್ ಪಡುಬಿದ್ರಿ, ರಮೀಝ್ ಪಡುಬಿದ್ರಿ, ಕಾಪು ಬ್ಲಾಕ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪುರ್ಟಾಡೊ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಲೆ, ಸಂಯೋಜಕ ಅಬ್ದುಲ್ ಅಜೀಜ್ ಹೆಜಮಾಡಿ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ದೀಪಕ್ ಎರ್ಮಾಳು, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರ್ಜುನ್ ನಾಯರಿ, ಆತಿಫ್ ಮುದರಂಗಡಿ, ಪಕ್ಷದ ಮುಖಂಡರಾದ ರಾಜೇಶ್ ರಾವ್ ಪಾಂಗಾಳ, ಸುಧೀರ್ ಕರ್ಕೇರ, ಯುವ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಲತೀಪ್ ಶಿರ್ವ, ಸುಲಕ್ಷಣ್ ಪೂಜಾರಿ, ಲಿತೇಶ್ ಕಟಪಾಡಿ, ಪುರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-28-899567877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.