ಕಾಪು (ಪಡುಬಿದ್ರಿ): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ವತಿಯಿಂದ ಮೇ 23ರಂದು ಸಂಜೆ 4 ಗಂಟೆಗೆ ಕಾಪು ಪೇಟೆಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿಯಾಝ್ ಪಡುಬಿದ್ರೆ ತಿಳಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ದೇಶ, ರಾಜ್ಯದ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಇದಕ್ಕೆ ಎನ್ಡಿಎ ನೇತೃತ್ವದ ಸರ್ಕಾರವೇ ನೇರ ಹೊಣೆಯಾಗಿದೆ. ಕಠಿಣ ಪರಿಶ್ರಮದಿಂದ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಕನಸು ಕಂಡ ವಿದ್ಯಾರ್ಥಿಗಳು ಹಾಗೂ ಪೋಷಕರ ಆಶಯಗಳಿಗೆ ಈ ಘಟನೆ ದೊಡ್ಡ ಹೊಡೆತವಾಗಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಎಸ್ಐಆರ್ ಮೂಲಕ ಮತದಾನದ ಹಕ್ಕಿನಿಂದ ವಂಚಿಸುವ ಕಾಯ್ದೆ ವಿರುದ್ಧ ಪ್ರತಿಭಟಿಸಲಾಗುವುದು. ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-192469855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.