ಹೊಸದಾಗಿ ರೂಪುಗೊಂಡ ಯಾವುದೇ ತಾಲ್ಲೂಕಿಗೆ ತಾಲ್ಲೂಕು ಆಸ್ಪತ್ರೆಯನ್ನು ಸರ್ಕಾರ ನೀಡಿಲ್ಲ. ಕಾಪುವಿಗೆ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಹಾಗೂ ಪಡುಬಿದ್ರಿ ಪಿಎಚ್‌ಸಿಯನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ
ಗುರ್ಮೆ ಸುರೇಶ್ ಶೆಟ್ಟಿ ಕಾಪು ಶಾಸಕ
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆ ಸಾಮರ್ಥ್ಯದ ಬ್ಲಾಕ್ ಆಸ್ಪತ್ರೆಯನ್ನಾಗಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಪು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಲಿದೆ
ಡಾ. ಬಸವರಾಜ ಜಿ. ಹುಬ್ಬಳ್ಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ