ಕಾಪು (ಪಡುಬಿದ್ರಿ): ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ ಹಳೆ ಮಾರಿಗುಡಿ ಪರಿಸರದಲ್ಲಿ ಹಲಸು ಮತ್ತು ಮಾವಿನ ಮೇಳ ಜೂನ್ 12ರಿಂದ 14ರವರೆಗೆ ಆಯೋಜಿಸಲಾಗಿದೆ.

ಶುಕ್ರವಾರ ಹಲಸು– ಮಾವಿನ ಮೇಳದ ಭಿತ್ತಿಪತ್ರ ಬಿಡುಗಡೆಗೊಳಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಬಳಲುತ್ತಿರುವ ಸ್ಥಳೀಯ ರೈತರಿಗೆ ನೇರ ಮಾರುಕಟ್ಟೆ ಕಲ್ಪಿಸಿ, ತಾವೇ ಬೆಳೆದ ವಿವಿಧ ತಳಿಯ ಹಲಸು, ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ವೇದಿಕೆ ಒದಗಿಸಲಾಗುವುದು ಎಂದು ಹೇಳಿದರು.

ಮೇಳದಲ್ಲಿ ಹಲಸು ಮತ್ತು ಮಾವಿನಿಂದ ತಯಾರಿಸಬಹುದಾದ ವಿವಿಧ ಖಾದ್ಯಗಳು, ಹಪ್ಪಳ, ಉಪ್ಪಿನಕಾಯಿ, ಜೂಸ್ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸು, ಮಾವಿಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಬೇಡಿಕೆ ಇದೆ. ಸ್ಥಳೀಯ ರೈತರ ಆರ್ಥಿಕ ಶಕ್ತಿ ಹೆಚ್ಚಿಸುವುದು, ಯುವಕರಿಗೆ ಕೃಷಿ ಆಧಾರಿತ ಉದ್ಯಮಗಳಲ್ಲಿ ಹೊಸ ಅವಕಾಶಗಳನ್ನು ಪರಿಚಯಿಸುವುದು ಮೇಳದ ಉದ್ದೇಶ ಎಂದು ತಿಳಿಸಿದರು.

ಸಂಘಟಕ ಗುರುಪ್ರಸಾದ್ ಮಾತನಾಡಿ, ವಿವಿಧ ಭಾಗಗಳಿಂದ ಸುಮಾರು 70 ಮಳಿಗೆಗಳು ಇರಲಿವೆ. ಅಪರೂಪದ, ರುಚಿಕರ ವಿವಿಧ ತಳಿಯ ಮಾವು, ಹಲಸಿನ ಹಣ್ಣುಗಳ ಪ್ರದರ್ಶನ, ಮಾರಾಟ ನಡೆಯಲಿದೆ. ಕೃಷಿ ತಜ್ಞರಿಂದ ಆಧುನಿಕ ಕೃಷಿ ಪದ್ಧತಿ, ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಲಾಗುವುದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-28-830587233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.