ಕಾಪು (ಪಡುಬಿದ್ರಿ): ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಇಲ್ಲಿನ ಉಳಿಯರಗೋಳಿಯ ದಂಡತೀರ್ಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 68 ಕಂಪನಿಗಳು ಭಾಗವಹಿಸಿದ್ದವು. 3,931 ಅಭ್ಯರ್ಥಿಗಳು ಪಾಲ್ಗೊಂಡಿದ್ದು, 1,898 ಮಂದಿ ಉದ್ಯೋಗ ಗಿಟ್ಟಿಸಿಕೊಂಡರು.

ಮೇಳದಲ್ಲಿ ಐಟಿಐ, ಸ್ನಾತಕೋತ್ತರ, ಪದವಿ, ಎಂ.ಬಿ.ಎ, ಎಂಜಿನಿಯರಿಂಗ್, ಇನ್ನಿತರ ಶೈಕ್ಷಣಿಕ ಅರ್ಹತೆ ಪಡೆದ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಐಟಿ ಬಿಟಿ, ಆಟೊಮೊಬೈಲ್ ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಫಾರ್ಮಸಿ, ಇನ್ಶೂರೆನ್ಸ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೇಜ್ಮೆಂಟ್, ಎಲೆಕ್ಟ್ರಿಕಲ್ಸ್, ಫಿಟ್ಟರ್, ನರ್ಸಿಂಗ್ ಇತ್ಯಾದಿ ಕ್ಷೇತ್ರಗಳ ಸಂಸ್ಥೆಗಳು ಪಾಲ್ಗೊಂಡಿದ್ದವು.

ಲಕ್ಷ್ಮೀಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ ಮೇಳವನ್ನು ಉದ್ಘಾಟಿಸಿ ಶುಭಹಾರೈಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ಭಾಗವಹಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ನೀಡಲಾಗುವುದು. ಅಭ್ಯರ್ಥಿಗಳು ಯಾವ ಕಂಪನಿಯಲ್ಲಿ ಉದ್ಯೋಗ ಬಯಸುತ್ತಾರೋ ಅದನ್ನು ಪಡೆಯಲು ಅವಕಾಶವಿದೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾಯ ಕಂಪನಿಗಳು ಇಂದೇ ನೇಮಕಾತಿ ಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಜಿಲ್ಲೆ ಶೈಕ್ಷಣಿಕವಾಗಿ ಮುಂದುವರಿದಿದ್ದು, ತುಂಬಾ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಆದರೆ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿರುವುದು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಿರುವುದು ಮಾದರಿ ಕಾರ್ಯ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುನಿಯಾಲು ಉದಯ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಶುಭದ ರಾವ್, ಹರೀಶ್ ಕಿಣಿ, ಜಿತೇಂದ್ರ ಫುಟಾರ್ಡೊ, ಶರ್ಫುದ್ದೀನ್ ಶೇಖ್, ನವೀನ್ ಚಂದ್ರ ಜೆ. ಶೆಟ್ಟಿ, ಶ್ರೀನಿವಾಸ್ ಬೆಂಗಳೂರು, ಹರಿಪ್ರಸಾದ್ ರೈ, ಕಾಪು ದಿವಾಕರ್ ಶೆಟ್ಟಿ, ಸಂತೋಷ್ ಕುಲಾಲ್, ಗೀತಾ ವಾಗ್ಲೆ, ಶಾಂತಲತಾ ಶೆಟ್ಟಿ, ವೈ. ಸುಧೀರ್ ಕುಮಾರ್, ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಆಲ್ಬನ್ ರಾಡ್ರಿಗಸ್, ಡಾ.ಪ್ರಶಾಂತ್ ಶೆಟ್ಟಿ, ನಡಿಕೆರೆ ರತ್ನಾಕರ್ ಶೆಟ್ಟಿ, ವಿಕ್ರಂ ಕಾಪು, ಸಂತೋಷ್ ಬೈರಂಪಳ್ಳಿ, ಲಕ್ಷ್ಮೀಶ ತಂತ್ರಿ, ಪ್ರಸಾದ್ ಕಾಂಚನ್, ನವೀನ್ ಎನ್. ಶೆಟ್ಟಿ, ಜ್ಯೋತಿ ಹೆಬ್ಬಾರ್, ಅಮೀರ್ ಮೊಹಮ್ಮದ್, ರಮೀಜ್ ಹುಸೇನ್, ಮೊಹಮ್ಮದ್ ನಿಯಾಜ್, ನಿರಂಜನ್ ಶೆಟ್ಟಿ, ರಾಜೇಶ್ ರಾವ್ ಪಾಂಗಳ, ಕಿರಣ್ ಉದ್ಯಾವರ, ಸುಧೀರ್ ಕರ್ಕೇರ, ಸತ್ಯನಾರಾಯಣ, ಕೆ.ಎಚ್. ಉಸ್ಮಾನ್, ಕರುಣಾಕರ್ ಪಡುಬಿದ್ರಿ ಭಾಗವಹಿಸಿದ್ದರು. ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ವಂದಿಸಿದರು. ಶ್ರೀಧರ್ ಪಿ.ಎಸ್. ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.