ಕಾಪು (ಪಡುಬಿದ್ರಿ): ನಾಡಪ್ರಭು ಕೆಂಪೇಗೌಡರ ಆದರ್ಶ ಮುಂದಿನ ಪೀಳಿಗೆಗೆ ದಾರಿದೀಪ. ಅವರ ದೂರದೃಷ್ಟಿಯನ್ನು ಯುವ ಪೀಳಿಗೆ ಮಾದರಿಯಾಗಿಸಿ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಪ್ರತಿಭಾ ಆರ್. ಹೇಳಿದರು.

ಶುಕ್ರವಾರ ಇಲ್ಲಿನ ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿ, ಕರ್ನಾಟಕದ ಹೆಸರು ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ. ಇಂತಹ ನಿರ್ಮಾತೃವಿನ ಆದರ್ಶ ಎಲ್ಲರಿಗೂ ಬೆಳಕಾಗಲಿ ಎಂದರು.

ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ಮಾತನಾಡಿ, ಕೆಂಪೇಗೌಡರ ಆಡಳಿತ ಕಾಲ ಅತ್ಯಂತ ಸುಭಿಕ್ಷವಾಗಿತ್ತು. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತುಕೊಟ್ಟಿದ್ದರು. ಅವರ ಆದರ್ಶಗಳು ಎಲ್ಲರಿಗೂ ಮಾದರಿ ಎಂದು ಹೇಳಿದರು.

ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪುರಸಭೆ ಮುಖ್ಯಾಧಿಕಾರಿ ನಾಗರಾಜ್, ಉಪಾಧ್ಯಕ್ಷೆ ಸರಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್, ಸದಸ್ಯರು, ಶಾಲಾ– ಕಾಲೇಜುಗಳ ಪ್ರಾಂಶುಪಾಲರು, ಉಪತಹಶೀಲ್ದಾರ್ಗಳಾದ ದೇವಕಿ, ರವಿಕಿರಣ್, ಅಶೋಕ್ ಕೋಟೆಕಾರ್, ಕಂದಾಯ ನಿರೀಕ್ಷಕ ಇಜ್ಜಾರ್ ಸಾಬಿರ್, ತಾಲ್ಲೂಕು ಕಚೇರಿ ಸಿಬ್ಬಂದಿ, ಗ್ರಾಮಾಡಳಿತ ಅಧಿಕಾರಿಗಳು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು. ತಾಲ್ಲೂಕು ಕಚೇರಿ ಸಿಬ್ಬಂದಿ ದೇವಿಚರಣ್ ನಿರೂಪಿಸಿದರು. ಲೋಕನಾಥ್ ಸ್ವಾಗತಿಸಿದರು. ದೇವಕಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.