ಪಡುಬಿದ್ರಿ: ಕಾಪು ಸಮೀಪ ಕೋತಾಲಕಟ್ಟೆ ಸರ್ವಿಸ್ ರಸ್ತೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯಗಳಾಗಿವೆ.

ವಿಶ್ವನಾಥ ಕೆ. ಪುತ್ರನ್ ಮೃತಪಟ್ಟವರು. ಅವರು ಕೈಪುಂಜಾಲಿನಿಂದ ಕಾಪುವಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಕೋತಾಲಕಟ್ಟೆ ಸರ್ವಿಸ್ ರಸ್ತೆ ಬಳಿ ಕಾರು ಡಿಕ್ಕಿಯಾಗಿ ಅವರು ಹಾಗೂ ಸಹಸವಾರ ಸಂತೋಷ್ ಎನ್. ಅಮೀನ್ ರಸ್ತೆಗೆ ಬಿದ್ದಿದ್ದರು. ಈ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ವಿಶ್ವನಾಥ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಆಂಬುಲೆನ್ಸ್ ಮೂಲಕ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಸಂತೋಷ್ ಅವರು ಗಂಭೀರ ಗಾಯಗೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-28-1187941573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.