ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪು ಲೀಲಾಧರ ಶೆಟ್ಟಿ ಪುತ್ರಿಯ ಅಪಹರಣ ಪ್ರಕರಣ: ನಾಲ್ವರ ಬಂಧನ

Published 18 ಡಿಸೆಂಬರ್ 2023, 4:43 IST
Last Updated 18 ಡಿಸೆಂಬರ್ 2023, 4:43 IST
ಅಕ್ಷರ ಗಾತ್ರ

ಕಾಪು: ಸಮಾಜ ಸೇವಕ ದಿ.ಲೀಲಾಧರ ಶೆಟ್ಟಿ ಅವರ ಪುತ್ರಿಯ ಅಪಹರಣ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಕಾಪು ಪೊಲೀಸರು ಕಾಸರಗೋಡಿನ ಕುಂಬ್ಳೆಯಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಪುತ್ರಿಯ ಸ್ನೇಹಿತರಾದ ಶಿರ್ವ ನಿವಾಸಿ ಗಿರೀಶ್ (20), ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಜೀಜ್ ಎಂದು ಗುರುತಿಸಲಾಗಿದೆ.

ಲೀಲಾಧರ ಶೆಟ್ಟಿ ಅವರ ದತ್ತು ಪುತ್ರಿ ಡಿ.11 ರಂದು ಮನೆಯಿಂದ ನಾಪತ್ತೆಯಾಗಿದ್ದಳು. ಮಗಳು ನಾಪತ್ತೆಯಾದ ಚಿಂತೆಯಲ್ಲಿ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಮರ್ಯಾದೆಗೆ ಅಂಜಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಪಹರಣ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಗಿರೀಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಳಿದ ಮೂವರ ವಿರುದ್ಧ ಅಪಹರಣಕ್ಕೆ ನೆರವು ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT