ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಟ್‌ಹೌಸ್ ಬೀಚ್‌: ವಿನೂತನ ಮಾದರಿಯ ಮತದಾನ ಜಾಗೃತಿ

Published 18 ಏಪ್ರಿಲ್ 2024, 12:35 IST
Last Updated 18 ಏಪ್ರಿಲ್ 2024, 12:35 IST
ಅಕ್ಷರ ಗಾತ್ರ

ಶಿರ್ವ: ಜಿಲ್ಲಾಡಳಿತದ ನೇತೃತ್ವದಲ್ಲಿ ಜಿಲ್ಲೆಯಲ್ಲಿ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಕಾಪು ವಿಧಾನಸಭಾ ಕ್ಷೇತ್ರದ ಕಾಪು ಲೈಟ್‌ಹೌಸ್ ಬೀಚ್‌ನಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ವಿನೂತನ ಮಾದರಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಯಿತು.

ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸ್ಪರ್ಧಾಕೂಟದಲ್ಲಿ ಲವಲವಿಕೆಯಿಂದ ಪಾಲ್ಗೊಂಡರು. ಹಗ್ಗಜಗ್ಗಾಟ, ನಿಂಬೆಹಣ್ಣು ಚಮಚ, ಗೋಣಿಚೀಲದಲ್ಲಿ ನೆಗೆದಾಟ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಆಕಾಶಕ್ಕೆ ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿದರು. ಜಿಲ್ಲಾಧಿಕಾರಿ ವಿದ್ಯಾಕುಮಾರಿ, ತಹಶೀಲ್ದಾರ್ ಡಾ.ಪ್ರತಿಭಾ ಆರ್. ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡು ಸ್ಫರ್ಧಾಳುಗಳನ್ನು ಹುರಿದುಂಬಿಸಿದರು.

ಜಿಲ್ಲೆಯಲ್ಲಿ ಶೇ 100 ಮತದಾನ ನಡೆಯುವ ನಿಟ್ಟಿನಲ್ಲಿ ಪ್ರವಾಸಿಗರು, ಸ್ಥಳೀಯ ಮತದಾರರಿಂದ ಪ್ರತಿಜ್ಞೆ ಸ್ವೀಕಾರ ಮಾಡಲಾಯಿತು. ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ವಾಗ್ದಾನ ಮಾಡಿದರು. ಹಲವು ಕಲಾತಂಡಗಳು, ಚೆಂಡೆ ಕಲಾವಿದರು ಮನರಂಜನೆ, ಮತದಾನ ಜಾಗೃತಿ ಮೂಡಿಸುವ ಕಿರು ಪ್ರಹಸನ ಪ್ರದರ್ಶಿಸಿದರು.

ಸಹಿ ಸಂಗ್ರಹ ಅಭಿಯಾನದ ಫಲಕದಲ್ಲಿ ಸಾರ್ವಜಿನಿಕರು ಸಹಿ ಮಾಡಿದರು. ಸೆಲ್ಫಿ ಪಾಯಿಂಟ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಕಾರ್ಯಕ್ರಮವನ್ನು ಡ್ರೋನ್‌ ಕ್ಯಾಮರಾದಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ಪ್ರಚಾರ ನೀಡಲಾಯಿತು.ಸಹಾಯಕ ಚುನಾವಣಾಧಿಕಾರಿ ಜಯಮಾಧವ ಪಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮೋಹನ್ ಇದ್ದರು. ಮತದಾನ ಜಾಗೃತಿ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು ಎಂದು ತಹಶಿಲ್ದಾರ್ ಪ್ರತಿಭಾ ತಿಳಿಸಿದರು.

ಕಾಪು ಬೀಚ್ ಪ್ರವಾಸಿಗರು ಮತ್ತು ಸ್ಥಳೀಯ ಮತದಾರರ ಪ್ರತಿಜ್ಞೆ ಸ್ವೀಕಾರ ಮಾಡಲಾಯಿತು. ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ವಾಗ್ದಾನ ಮಾಡಿದರು.
ಕಾಪು ಬೀಚ್ ಪ್ರವಾಸಿಗರು ಮತ್ತು ಸ್ಥಳೀಯ ಮತದಾರರ ಪ್ರತಿಜ್ಞೆ ಸ್ವೀಕಾರ ಮಾಡಲಾಯಿತು. ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ವಾಗ್ದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT