ಪಡುಬಿದ್ರಿ: ಕಾಪು ತಾಲ್ಲೂಕು ಕ್ರೀಡಾಂಗಣವನ್ನು ಖೇಲೊ ಇಂಡಿಯಾ ಯೋಜನೆ ಅಡಿಯಲ್ಲಿ ಬಹೂಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲು ₹14 ಕೋಟಿ ಅಂದಾಜು ವೆಚ್ಚದ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕ್ರೀಡಾಂಗಣ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಸದನದಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಉತ್ತರ ನೀಡಿದ್ದಾರೆ. ಕ್ರೀಡಾಂಗಣದಲ್ಲಿ ನೆಲ ಸಮತಟ್ಟು ಮಾಡುವ ಕಾಮಗಾರಿ ಪೂರ್ಣಗೊಂಡಿದೆ. ಪೆವಿಲಿಯನ್ ಕಟ್ಟಡದಲ್ಲಿ ಎರಡು ಕೊಠಡಿಗಳು ನಿರ್ಮಾಣಗೊಂಡಿವೆ. ಪ್ರೇಕ್ಷಕರ ಗ್ಯಾಲರಿ, ಆರು ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಶೌಚಾಲಯ, ನೀರು ಸರಬರಾಜು ಹಾಗೂ ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕ್ರೀಡಾಂಗಣದ ದುರಸ್ತಿ ಮತ್ತು ಸಮಗ್ರ ಅಭಿವೃದ್ಧಿಗೆ ಅನುದಾನದ ಲಭ್ಯತೆಯಂತೆ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿರುವುದಾಗಿ ಶಾಸಕರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ 68 ಇಲಾಖೆಗಳಲ್ಲಿ 5,608 ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ಭರ್ತಿಗೆ ವೇಗ ನೀಡಲಾಗುತ್ತಿದೆ. 2026ರ ಫೆಬ್ರುವರಿ 27ರ ಸರ್ಕಾರಿ ಆದೇಶದಂತೆ, ರಾಜ್ಯದಾದ್ಯಂತ ಖಾಲಿ ಇರುವ ನೇರ ನೇಮಕಾತಿಯ ಸುಮಾರು 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಮುಂದಿನ 30 ದಿನಗಳಲ್ಲಿ ಆರಂಭಿಸಲು ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ಸದನದಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಭರವಸೆ ನೀಡಿರುವುದಾಗಿ, ಶಾಸಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-28-2126921295

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.