ಕಾಪು (ಪಡುಬಿದ್ರಿ): ಇಲ್ಲಿನ 3 ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ ಮಾರ್ಚ್ 24 ಮತ್ತು 25ರಂದು ಮಾರಿಗುಡಿಗಳಲ್ಲಿ ನಡೆಯಲಿದೆ.

ಸುಗ್ಗಿ ಮಾರಿಪೂಜೆಯು ತುಳುನಾಡಿನ 7 ಜಾತ್ರೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ಹಳೆ ಮಾರಿಗುಡಿ, ಹೊಸ ಮಾರಿಗುಡಿ, 3ನೇ ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಮಾರಿಗುಡಿಗಳಲ್ಲಿ ವರ್ಷಕ್ಕೆ 3 ಬಾರಿ ಸುಗ್ಗಿ, ಆಟಿ, ಜಾರ್ದೆ ಮಾರಿಪೂಜೆ ನಡೆಯುತ್ತದೆ. ಸುಗ್ಗಿ ಮಾರಿಪೂಜೆ ವೈಭವದಿಂದ ನಡೆಯುತ್ತದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮಾತ್ರವಲ್ಲದೆ ಕಾಸರಗೋಡು, ಶಿವಮೊಗ್ಗ, ಚಿಕ್ಕಮಗಳೂರು, ಮುಂಬೈ, ಬೆಂಗಳೂರು ಸೇರಿದಂತೆ ಹೊರರಾಜ್ಯ, ಹೊರರಾಷ್ಟ್ರಗಳಿಂದಲೂ ಭಕ್ತರು ಪಾಲ್ಗೊಳ್ಳುತ್ತಾರೆ.

ಮಾರಿಪೂಜೆಯಂದು ದೇವಳಕ್ಕೆ ಬರುವ ಭಕ್ತರಿಗೆ ದೇವಿಯ ದರ್ಶನಕ್ಕೆ ಸರತಿ ಸಾಲಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಹಣ್ಣು– ಕಾಯಿ, ಕುರಿ– ಕೋಳಿ ಹರಕೆ ಸಮರ್ಪಣೆಗೆ ವ್ಯವಸ್ಥೆ, ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿ, ಕಾರ್ಯನಿರ್ವಹಣಾ ಅಧಿಕಾರಿ, ಅಭಿವೃದ್ಧಿ ಸಮಿತಿ, ಮಾತೃ ವೈಭವ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-28-1333619676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.