ಬ್ರಹ್ಮಾವರ: ಸಾಲಿಗ್ರಾಮ ಕಾರ್ಕಡ ಗೆಳೆಯರ ಬಳಗದ ವತಿಯಿಂದ ಡಾ.ಕೋಟ ಶಿವರಾಮ ಕಾರಂತ ಜನ್ಮ ದಿನಾಚರಣೆ, ಗಾನ ನಮನ ಸಂಸ್ಮರಣೆ, ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭ ಅ.17ರಂದು ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಕಾರಂತರ ಒಡನಾಡಿ ಪಾಂಡೇಶ್ವರ ಚಂದ್ರಶೇಖರ ಚಡಗ ಅವರಿಗೆ ‘ಗೆಳೆಯರ ಬಳಗ ಕಾರಂತ ಪುರಸ್ಕಾರ’ ನೀಡಿ ಗೌರವಿಸಲಾಗುವುದು. ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕಾರಂತ ಭಾವಚಿತ್ರಕ್ಕೆ ಪುಷ್ಪ ನಮನ, ಹಿರಿಯ ಸಾಹಿತಿ ಕುಂದಾಪುರದ ಎ.ಎಸ್.ಎನ್. ಹೆಬ್ಬಾರ್ ಕಾರಂತ ಸಂಸ್ಮರಣೆ ಮಾಡುವರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿ ಆನಂದ್ ಸಿ. ಕುಂದರ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ ಭಾಗವಹಿಸುವರು.

ನಂತರ ಕೆ.ಚಂದ್ರಕಾಂತ ನಾಯರಿ ಸಂಯೋಜನೆಯಲ್ಲಿ ಗಾನ ನಮನ ಮತ್ತು ಕಾರ್ಕಳ ಶಶಿಕಾಂತ ಶೆಟ್ಟಿ ಮತ್ತು ತಂಡದವರಿಂದ ‘ರಾಜಾರುದ್ರ ಕೋಪ’ ಯಕ್ಷಗಾನ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.