ಬುಧವಾರ, ಸೆಪ್ಟೆಂಬರ್ 30, 2020
21 °C

ಇಬ್ರಾಹಿಂ ಸಾಹೇಬ್ ಅವರಿಗೆ ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬ್ರಹ್ಮಾವರ: ಡಾ.ಕೋಟ ಶಿವರಾಮ ಕಾರಂತರ ಜನ್ಮದಿನದ ಪ್ರಯುಕ್ತ ಸಾಲಿಗ್ರಾಮ ಗೆಳೆಯರ ಬಳಗ ನೀಡುವ ವಾರ್ಷಿಕ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ, ಪ್ರಗತಿಪರ ಚಿಂತಕ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ ಭಾಜನರಾಗಿದ್ದಾರೆ.

ಈ ಪುರಸ್ಕಾರವು  ₹ 5ಸಾವಿರ ನಗದು ಹಾಗೂ ಸನ್ಮಾನ ಪತ್ರವನ್ನು ಒಳಗೊಂಡಿದೆ. ಅಕ್ಟೋಬರ್ 11ರಂದು ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ  ಅಧ್ಯಕ್ಷ  ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು