ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡುಬಿದ್ರಿ: ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

Last Updated 29 ಜುಲೈ 2022, 4:19 IST
ಅಕ್ಷರ ಗಾತ್ರ

ಪಡುಬಿದ್ರಿ: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿನ ಆಚರಿಸಲಾಯಿತು.

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ಕಾಲು ಕಳೆದುಕೊಂಡ ಅದಮಾರಿನ ಯೋಧ ಬಾಲಕೃಷ್ಣ ಮಾತನಾಡಿ, ‘ಕಾರ್ಗಿಲ್ ಯುದ್ಧ ದೇಶದ ವೀರತ್ವದ ಸಂಕೇತ. ವೈರಿ ಪಡೆಗಳನ್ನು ಓಡಿಸಿ ಕಾರ್ಗಿಲ್ ಪ್ರದೇಶವನ್ನು ಮರಳಿ ಪಡೆಯುವಲ್ಲಿ ಭಾರತ ಯಶಸ್ವಿ
ಯಾಯಿತು. ನಮ್ಮ ಸೈನ್ಯದ ಜಗತ್ತಿನಲ್ಲೇ ಅತ್ಯಂತ ಬಲಿಷ್ಠವಾದುದು’ ಎಂದರು.

ಪ್ರಾಂಶುಪಾಲ ಎಂ. ರಾಮಕೃಷ್ಣ ಪೈ ಅಧ್ಯಕ್ಷತೆ ವಹಿಸಿದ್ದರು. ಕಾರ್ಗಿಲ್‌ನಲ್ಲಿ ಮಡಿದ ವೀರ ಯೋಧರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಲಾಯಿತು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಜಯಂಶಕರ್ ಕಂಗಣ್ಣಾರು ಇದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಕೀರ್ತಿ ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಆದಿತ್ಯ ಧನ್ಯವಾದವಿತ್ತರು. ಕನ್ನಡ ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT