ಉಡುಪಿ: ‘ಬಾಹುಬಲಿ ಸ್ವಾಮಿ ಸಾರಿದ ಸಂದೇಶ ಇಂದಿಗೂ ಪ್ರಸ್ತುತವಾಗಿದೆ. ಮಸ್ತಕಾಭಿಷೇಕ ಮಾಡುವುದು ಭಗವಂತನಿಗಾಗಿ ಅಲ್ಲ. ನಾವು ತಿಳಿದೋ ತಿಳಿಯದೆಯೋ ಮಾಡಿರುವ ಪ್ರಮಾದಗಳನ್ನು ಕಳೆಯಲು ಮಸ್ತಕಾಭಿಷೇಕ ಮಾಡುತ್ತೇವೆ’ ಎಂದು ಕಾರ್ಕಳ ದಾನಶಾಲೆ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಹೇಳಿದರು.

2027ರ ಫೆಬ್ರುವರಿ 18ರಿಂದ 28ರವರೆಗೆ ನಡೆಯಲಿರುವ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾ ಮಸ್ತಕಾಭಿಷೇಕದ ಅಂಗವಾಗಿ ಮಸ್ತಕಾಭಿಷೇಕ ಸಮಿತಿ ವತಿಯಿಂದ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರ ದಾನಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಿತಿಯ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ‘ಜಗತ್ತಿಗೆ ತ್ಯಾಗದ ಸಂದೇಶ ನೀಡಿರುವ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕಕ್ಕೆ ಸರ್ಕಾರ, ವಿರೋಧ ಪಕ್ಷ ಸೇರಿದಂತೆ ಎಲ್ಲರ ಸಹಕಾರ ಅಗತ್ಯ’ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಮಹಾಮಸ್ತಕಾಭಿಷೇಕವು ಜಿಲ್ಲೆ, ರಾಜ್ಯಕ್ಕೆ ಸೀಮಿತವಾಗಬಾರದು. ಅದು ರಾಷ್ಟ್ರದ ಹಬ್ಬವಾಗಬೇಕೆಂಬುದು ನಮ್ಮೆಲ್ಲರ ಆಶಯ’ ಎಂದು ಹೇಳಿದರು.

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್ಪಿ ಸುಧಾಕರ ನಾಯಕ್, ಪ್ರಮುಖರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಅದಾನಿ ಗ್ರೂಪ್ನ ಅಧ್ಯಕ್ಷ ಕಿಶೋರ್ ಆಳ್ವ, ಪದ್ಮಪ್ರಸಾದ ಅಜಿಲ, ರತ್ನಾಕರರಾಜ್ ಅರಸ, ಆಳ್ವಾಸ್ ಫೌಂಡೇಷನ್ ಅಧ್ಯಕ್ಷ ಡಾ. ಮೋಹನ ಆಳ್ವ, ದೇವಿಪ್ರಸಾದ್ ಶೆಟ್ಟಿ ಇದ್ದರು. ಅಜಿತ್ ಜೈನ್ ನಿರೂಪಿಸಿದರು. ಪುಷ್ಪರಾಜ ಜೈನ್ ಸ್ವಾಗತಿಸಿದರು. ಸರ್ವೇಶ್ ಜೈನ್ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಮಹಾ ಮಸ್ತಕಾಭಿಷೇಕ ಕಾರ್ಯಾಲಯವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-126-1759920271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.