ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ | ಕಾರು ಡಿಕ್ಕಿ: ಮಹಿಳೆ ಸಾವು

Published 27 ಜನವರಿ 2024, 14:27 IST
Last Updated 27 ಜನವರಿ 2024, 14:27 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ನಂದಳಿಕೆ ಗ್ರಾಮದಲ್ಲಿ ಅತಿವೇಗದ ಪರಿಣಾಮ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಮರಿಯ ಫೆರ್ನಾಂಡೀಸ್ (60) ಮೃತಪಟ್ಟವರು. ಗ್ರಾಮದ ಮಾವಿನಕಟ್ಟೆ ಎಂಬಲ್ಲಿನ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಅಜಾಗರೂಕತೆಯಿಂದ ರಸ್ತೆಯ ಬಲಭಾಗದಲ್ಲಿ ಚಲಾಯಿಸಿಕೊಂಡು, ಬೆಳ್ಮಣ್‌ನಿಂದ ಕಾರ್ಕಳದತ್ತ ತೆರಳುತ್ತಿದ್ದ ಕಾರಿನ ಬಲಬದಿ ಡೋರ್‌ಗೆ ಡಿಕ್ಕಿ ಹೊಡೆದಿದ್ದರಿಂದ ‌ಘಟನೆ ಸಂಭವಿಸಿದೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT