ಕಾರ್ಕಳ: ‘ವಿದ್ಯಾರ್ಥಿಗಳು ದೂರದರ್ಶಿತ್ವ ಚಿಂತನೆಗಳ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಕಾರ್ಕಳ ಹಿರಿಯಂಗಡಿ ಎಸ್‌ಎನ್‌ವಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಜೈನ್ ಹೇಳಿದರು.
ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗಾಗಿ ನಡೆದ ಪ್ರೇರಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಕಿರಣ್ ಎಂ, ‘ವಿದ್ಯಾರ್ಥಿಗಳು ಪದವಿಯೊಂದಿಗೆ ವಿವಿಧ ಕೌಶಲಗಳನ್ನು ಗಳಿಸಿಕೊಂಡು ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆ ಮಾಡಿಕೊಳ್ಳಬೇಕು’ ಎಂದರು.
ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಚಂದ್ರಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ವಿದ್ಯಾಧರ ಹೆಗ್ಡೆ, ಗ್ರಂಥಪಾಲಕ ವೆಂಕಟೇಶ್, ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಸುದರ್ಶನ್ ಪಿ, ಸಹಾಯಕ ಪ್ರಾಧ್ಯಾಪಕ ಪ್ರೊ. ಮೈತ್ರಿ ಇದ್ದರು.
ಸಂಗೀತ ಮತ್ತು ಬಳಗ ಪ್ರಾರ್ಥಿಸಿದರು. ಐಕ್ಯುಎಸಿ ಸಂಚಾಲಕಿ ಸುಷ್ಮಾ ರಾವ್ ಕೆ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಗಣೇಶ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಜಯ ಭಾರತಿ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಎಸ್ಇಪಿ, ಗ್ರಂಥಾಲಯ, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಅಧಿವೇಶನ ನಡೆದವು.