ಕಾರ್ಕಳ: ಕ್ರಿಯೇಟಿವ್ ಸಂಸ್ಥೆ ಹತ್ತಾರು ಮಂದಿಗೆ ಧ್ವನಿಯಾಗಬಲ್ಲ ಸಾಮಾಜಿಕ ಕಾರ್ಯ ಚಟುವಟಿಕೆಗಳನ್ನು ನಡೆಸಿರುವುದು ಶ್ಲಾಘನೀಯ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.

ಇಲ್ಲಿನ ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಲೋಕಾರ್ಪಣೆಯ ಅಂಗವಾಗಿ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಬುಧವಾರ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ರಿಯೇಟಿವ್ ಸಂಸ್ಥೆಯು ಕ್ಯಾಂಪಸ್ಗೆ ತನ್ನ ಕಾರ್ಯ ಚಟುವಟಿಕೆ ಸೀಮಿತಗೊಳಿಸಿಲ್ಲ. ಈ ಸೊಸೈಟಿಯಿಂದಾಗಿ ಊರಿನ ಅನೇಕ ಜನರಿಗೆ ಒಳಿತಾಗಬೇಕು ಎಂದರು.

ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹಾಗೂ ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕ ಗಣನಾಥ ಶೆಟ್ಟಿ ಮಾತನಾಡಿ, ಕ್ರಿಯೇಟಿವ್ ಸಂಸ್ಥೆ ಶೈಕ್ಷಣಿಕ ದೃಷ್ಟಿಕೋನವನ್ನಿಟ್ಟುಕೊಂಡು ಕಾರ್ಯನಿರ್ವಹಿಸದೆ, ಅನೇಕ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಧನ ಸಹಾಯ ನೀಡುವ ಮೂಲಕ ನೊಂದವರ ಬದುಕಿಗೆ ಆಶಾಕಿರಣವಾಗಿದೆ. ಈಗಾಗಲೇ ₹5 ಕೋಟಿಗಿಂತಲೂ ಅಧಿಕ ಮೊತ್ತದ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ನೀಡಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯ ಎಂದರು.

ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿ, ಶೈಕ್ಷಣಿಕ ರಂಗದಲ್ಲಿ ಮಾತ್ರವಲ್ಲದೆ ಸಹಕಾರ ರಂಗಕ್ಕೂ ಸಂಸ್ಥೆ ಕಾರ್ಯ ಚಟುವಟಿಕೆಯನ್ನು ವಿಸ್ತರಿಸಿದೆ. ಸಂಸ್ಥಾಪಕರು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.

ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್. ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಸಹಕಾರ ರಂಗದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ಹೆಚ್ಚಿನ ಸೇವೆಯನ್ನು ಜನಸಾಮಾನ್ಯರಿಗೆ ನೀಡುತ್ತಿವೆ ಎಂದರು.

ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ಹಿರ್ಗಾನ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ಆದರ್ಶ ಎಂ.ಕೆ. ಮಾತನಾಡಿ, ಜನಸಾಮಾನ್ಯರು ಆರ್ಥಿಕವಾಗಿ ಸಬಲರಾಗಿ ನೆಮ್ಮದಿಯಾಗಿ ಜೀವನ ನಡೆಸುವಲ್ಲಿ ಸಹಕಾರ ಸಂಘಗಳ ಪಾತ್ರ ದೊಡ್ಡದು. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಾರಂಭಿಸಿದ್ದೇವೆ ಎಂದರು.

ಬಿ.ಎಂ. ಶಾಲೆ ಹಾಗೂ ಅಗತ್ಯವಿರುವವರಿಗೆ ಧನಸಹಾಯ ವಿತರಿಸಲಾಯಿತು. ಷೇರುದಾರರಿಗೆ ಪ್ರಮಾಣಪತ್ರ ಮತ್ತು ಸಾಲ ಸೌಲಭ್ಯ ನೀಡಲಾಯಿತು. ನವೀನ್ ಪಿಂಟೊ, ಸುನಿಲ್ ಕುಮಾರ್ ಜಿ., ಯೋಗೀಶ್ ಅವರನ್ನು ಗೌರವಿಸಲಾಯಿತು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕ ಅಶ್ವತ್ ಎಸ್.ಎಲ್, ವಿದ್ವಾನ್ ಗಣಪತಿ ಭಟ್, ಅಮೃತ್ ರೈ ಯು, ವಿಮಲ್ ರಾಜ್, ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ ಹೆಗಡೆ, ಸೊಸೈಟಿಯ ನಿರ್ದೇಶಕ ಹರೀಶ್ ಡಿ, ಆಶಾ ಕೆ.ಎಸ್, ರಶ್ಮಿ, ಸುನಿಲ್ ಕುಮಾರ್, ಸುನಿಲ್ ಶೆಟ್ಟಿ, ಅಕ್ಷತಾ ಶೆಣೈ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-1928125181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.