ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಬರ್ ಕ್ರೈಂ | ವಿದ್ಯಾವಂತ ನಿರುದ್ಯೋಗಿಗಳೆ ಗುರಿ: ಎಎಸ್‌ಪಿ ಸಿದ್ದಲಿಂಗಪ್ಪ

Published 4 ನವೆಂಬರ್ 2023, 13:36 IST
Last Updated 4 ನವೆಂಬರ್ 2023, 13:36 IST
ಅಕ್ಷರ ಗಾತ್ರ

ಕಾರ್ಕಳ: ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು ವಿದ್ಯಾವಂತ ನಿರುದ್ಯೋಗಿಗಳೆ ಇಂತಹ ಪ್ರಕರಣಗಳಿಗೆ ಗುರಿಯಾಗುತ್ತಿದ್ದಾರೆ‌ ಎಂದು ಎಎಸ್‌ಪಿ ಸಿದ್ದಲಿಂಗಪ್ಪ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಅಂಗವಾಗಿ ಇಲ್ಲಿನ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವು   ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಇವುಗಳ ಸಹಯೋಗದಲ್ಲಿ ಶನಿವಾರ ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಹಾಲ್ಡಿನ್ ಗ್ಲಾಸ್ ಹಾಲ್‌ನಲ್ಲಿ ಆಯೋಜಿಸಿದ್ದ ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಇತ್ತೀಚಿನ ವರ್ಷಗಳಲ್ಲಿ ತಾಂತ್ರಿಕ ಶೈಲಿಯ ಅಪರಾಧಗಳು ನಡೆಯುತ್ತಿವೆ. ಹ್ಯಾಕರ್ಸ್ ಮೂಲಕ ಖಾಸಗಿ ಮಾಹಿತಿ ಕದಿಯಲಾಗುತ್ತಿದೆ‌. ಸೈಬರ್ ಪ್ರಕರಣಗಳಲ್ಲಿ ನೈಜೀರಿಯಾ ಪ್ರಜೆಗಳೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಪೋಲಿಸ್ ಇಲಾಖೆ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ, ಸೈಬರ್ ಅಪರಾಧಗಳು ರಾಷ್ಟ್ರೀಯ ಮಟ್ಟಗಳಲ್ಲಿ ಹರಡಿಕೊಂಡಿರುವುದರಿಂದ ಪತ್ತೆ ಮಾಡಲು ಬಹಳ ಸಮಯ ಹಿಡಿಯುತ್ತಿದೆ. ಅದಕ್ಕಾಗಿ ಅಪರಾಧ ಕುರಿತ ಅರಿವು ಮೂಡಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಮಾಹಿತಿ ಶಿಬಿರ ಹಮ್ಮಿಕೊಳ್ಳುವ ಮೂಲಕ ತಾಲ್ಲೂಕು ಪತ್ರಕರ್ತರ ಸಂಘ ಉತ್ತಮ ಕೆಲಸ ಮಾಡುತ್ತಿದೆ’ ಎಂದರು.

ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಮಾತನಾಡಿ, ನಮ್ಮ ದೌರ್ಬಲ್ಯವನ್ನು ಸೈಬರ್ ಕ್ರೈಂ ಅಪರಾಧಿಗಳು ಬಳಸಿಕೊಂಡು ವಂಚನೆ ಮಾಡುತ್ತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರಜತ ಮಹೋತ್ಸವ ಸಮಿತಿ ಸಂಚಾಲಕ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ಮಾತನಾಡಿ, ರಾಜ್ಯದಲ್ಲಿ ಶಾಲಾ ಕಾಲೇಜುಗಳೇ ಗಾಂಜಾ ವ್ಯಸನಿಗಳ ಟಾರ್ಗೆಟ್ ಆಗುತ್ತಿವೆ. ತಾಲ್ಲೂಕಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಸೈಬರ್ ಕ್ರೈಂ, ಡ್ರಗ್ಸ್ ಹಾವಳಿ ತಡೆಗಟ್ಟಲು ಮಾಹಿತಿ ಶಿಬಿರ ನಡೆಯಲಿವೆ‌ ಎಂದರು.

ಲಯನ್ಸ್ ಗವರ್ನರ್ ಡಾ.ನೇರಿ ಕರ್ನಾಲಿಯೊ, ಬೆಳಕು ಸಂಯೋಜಕರ ಸಂಘಟನೆ ಜಿಲ್ಲಾಧ್ಯಕ್ಷ ಕೆ. ಧರ್ಮರಾಜ್ ಮಾತನಾಡಿದರು. ಜೆ. ಸುಧೀರ್ ಹೆಗ್ಡೆ ಬೈಲೂರು, ಸಂತೋಷ್ ವಾಗ್ಳೆ, ಲಯನ್ಸ್ ಕ್ಲಬ್ ನೀರೆ-ಬೈಲೂರು ಅಧ್ಯಕ್ಷ ಕೆ. ಸುಜಯ್ ಜತ್ತನ್ನ, ಪ್ರಾಂಶುಪಾಲ ಗುರುಮೂರ್ತಿ ಟಿ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ ಇದ್ದರು.

ನಗರ ಠಾಣೆ ಎಸ್ಐ ಸಂದೀಪ್ ಶೆಟ್ಟಿ, ಮಣಿಪಾಲ ಠಾಣೆಯ ದೇವರಾಜ್ ಟಿ.ವಿ. ಮಾಹಿತಿ ನೀಡಿದರು. ಪತ್ರಕರ್ತರಾದ ಸಿದ್ಧಾಪುರ ವಾಸುದೇವ ಭಟ್ ಸ್ವಾಗತಿಸಿದರು. ಹರೀಶ್ ಬೈಲೂರು ‌ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT