ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published 8 ಜೂನ್ 2024, 14:08 IST
Last Updated 8 ಜೂನ್ 2024, 14:08 IST
ಅಕ್ಷರ ಗಾತ್ರ

ಕಾರ್ಕಳ: ಸಾಹಿತಿ, ಪತ್ರಕರ್ತ ದಿ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ತಾ‌ಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಷರೀಫ್, ಸಾಹಿತ್ಯ, ಪತ್ರಿಕಾ ಕ್ಷೇತ್ರದಲ್ಲಿ ಕನಿಷ್ಠ ಹತ್ತು ವರ್ಷ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರು ಅಥವಾ ಸಾಹಿತಿಗಳು ಅರ್ಜಿ ಸಲ್ಲಿಸಬಹುದು. ಪ್ರಶಸ್ತಿ ₹10 ಸಾವಿರ ನಗದು, ರಜತ ಫಲಕ ಒಳಗೊಂಡಿರುತ್ತದೆ‌ ಎಂದರು.

ಸ್ವವಿವರ, ಇತ್ತೀಚಿನ ಭಾವಚಿತ್ರ ಒಳಗೊಂಡ ಅರ್ಜಿಯನ್ನು ಮಹಮ್ಮದ್ ಶರೀಫ್, ಅಧ್ಯಕ್ಷರು, ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಗ್ಲೆಗುಡ್ಡೆ ಪೋಸ್ಟ್ ಕುಕ್ಕುಂದೂರು, 576117 ವಿಳಾಸಕ್ಕೆ ಜೂನ್ 21ರೊಳಗೆ ಕಳುಹಿಸಬೇಕು. ಮಾಹಿತಿಗೆ ‌9845846213, 9945857561 ಸಂಪರ್ಕಿಸಬಹುದು ಎಂದು ತಿಳಿಸಿದರು.

ಸಂಘದ ಕಾರ್ಯದರ್ಶಿ ಹರೀಶ್ ಆಚಾರ್ಯ, ಕೋಶಾಧಿಕಾರಿ ಮಹಮ್ಮದ್ ಖಲೀಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT