ಕಾರ್ಕಳ: ನಗರದಲ್ಲಿ ಪರಿಸರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ‘ಸ್ವಚ್ಛ ಕಾರ್ಕಳ ಬ್ರಿಗೇಡ್’ ವತಿಯಿಂದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

ನಗರದ ಹಲವೆಡೆ ಜಲಜೀವನ ಮಿಷನ್ ಅಡಿಯಲ್ಲಿ ನೀರಿನ ಪೈಪ್ ಅಳವಡಿಸುವ ವೇಳೆ ತೆಗೆಯಲಾದ ಮಣ್ಣನ್ನು ಚರಂಡಿಗಳಲ್ಲೇ ಹಾಕಿರುವುದರಿಂದ ಮಳೆನೀರಿನ ಹರಿವಿಗೆ ಅಡಚಣೆಯಾಗುತ್ತಿದೆ. ಇದರಿಂದ ಚರಂಡಿಗಳಲ್ಲಿ ಹೂಳು ತುಂಬಿ, ಅನೇಕ ಕಡೆ ನೀರು ನಿಲ್ಲುವ ಸಮಸ್ಯೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಕೆಲವರು ರಸ್ತೆ ಬದಿಯ ಚರಂಡಿಗಳಿಗೆ ಕಸ ಎಸೆಯುತ್ತಿರುವುದರಿಂದ ಮಳೆಯ ನೀರಿನೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ ಮತ್ತು ಕೆರೆಗಳಿಗೆ ಸೇರಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ಇದು ಸಾರ್ವಜನಿಕರ ಆರೋಗ್ಯಕ್ಕೂ ಹಾನಿಕಾರಿಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆ, ಕಸ ಎಸೆಯುವವರನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸುವಂತೆ ಮನವಿ ಮಾಡಲಾಗಿದೆ.

ಪ್ರಸಾದ್, ನಾಗೇಶ್ ರಾವ್, ರಾಜೇಂದ್ರ ಅಮೀನ್, ಅನಿಲ್, ನಿಖಿಲ್ ಆಚಾರ್ಯ, ಶ್ರೀಶ ಭಟ್, ಪ್ರಕಾಶ್ ರಾವ್, ಸುಬ್ರಹ್ಮಣ್ಯ ದೇವಾಡಿಗ, ಶ್ರೀರಾಮ ಮೊಗೇರ, ಡಾ. ಗುರುಚರಣ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-28-1800557523

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.