ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ: ಟಿವಿ ವಿಚಾರಕ್ಕೆ ದಂಪತಿ ಜಗಳ, ಸಾವಿನಲ್ಲಿ ಅಂತ್ಯ

Published 25 ಜೂನ್ 2023, 16:01 IST
Last Updated 25 ಜೂನ್ 2023, 16:01 IST
ಅಕ್ಷರ ಗಾತ್ರ

ಕಾರ್ಕಳ: ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳವಾಗಿ ಇಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ನಲ್ಲೂರಿನಲ್ಲಿ ಭಾನುವಾರ ನಡೆದಿದೆ.

ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಯಶೋದಾ (32) ಸಾವಿಗೀಡಾದ ದಂಪತಿ. ಮನೆಯ ಟಿವಿ ಮಾರಾಟದ ಸಂಬಂಧ ಇಬ್ಬರಲ್ಲೂ ಜಗಳ ಆರಂಭವಾಗಿತ್ತು. ಯಶೋದಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋದಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್ ಕೂಡ ನೀರುಪಾಲಾದರು ಎನ್ನಲಾಗಿದೆ.

ದಂಪತಿ ಕಳೆದ ಎರಡು ವರ್ಷಗಳಿಂದ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಪುತ್ರ ಹಾಗೂ 9 ವರ್ಷದ ಪುತ್ರಿ ಅನಾಥರಾಗಿದ್ದಾರೆ. ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ, ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ತೇಜಸ್ವಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT