ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ: ಸಾಮಾಜಿಕ ಸೇವಾ ಚಟುವಟಿಕೆಗಳಿಂದ ಮಾನವೀಯತೆ

Published 7 ಡಿಸೆಂಬರ್ 2023, 15:52 IST
Last Updated 7 ಡಿಸೆಂಬರ್ 2023, 15:52 IST
ಅಕ್ಷರ ಗಾತ್ರ

ಕಾರ್ಕಳ: ಸಾಮಾಜಿಕ ಸೇವಾ ಚಟುವಟಿಕೆಗಳಿಂದ ಮಾನವೀಯತೆ ಅಳವಡಿಸಿಕೊಳ್ಳಲು ಸಾಧ್ಯ ಎಂದು ಕುಂದಾಪುರದ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ರಕ್ತನಿಧಿ ಕಾರ್ಯದರ್ಶಿ ಜಯಕರ ಶೆಟ್ಟಿ ಹೇಳಿದರು.

ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿ, ಕುಂದಾಪುರ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ ಹಾಗೂ ಉಡುಪಿ ಶಾಖೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ತಿಳಿಸಿದರು

ಶಿಬಿರದಲ್ಲಿ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ, ಯುವಚೇತನಾ ರೋವರ್ಸ್ ಮತ್ತು ರೇಂಜರ್ಸ್‌, ಕ್ರೀಡಾ ಸಂಘ, ಲಲಿತಕಲಾ ಸಂಘ, ಸಾಹಿತ್ಯ ಸಂಘದ ಸ್ವಯಂಸೇವಕರು, ಎಂ.ಕಾಂ. ವಿಭಾಗದ ವಿದ್ಯಾರ್ಥಿಗಳಿಂದ 59 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಮಂಗಳೂರಿನ ಎಚ್‌ಡಿಎಫ್‌ಸಿ ಬ್ಯಾಂಕ್ ಶಿಬಿರಕ್ಕೆ ಸಹಕಾರ ನೀಡಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕಿರಣ್ ಎಂ. ಮಾತನಾಡಿದರು. ರೆಡ್‌ಕ್ರಾಸ್ ಸೊಸೈಟಿ ಕುಂದಾಪುರದ ಖಚಾಂಚಿ ಶಿವರಾಮ ಶೆಟ್ಟಿ, ಸದಸ್ಯ ಸದಾನಂದ ಶೆಟ್ಟಿ, ಎಚ್‌ಡಿಎಫ್‌ಸಿಯ ಅಧಿಕಾರಿ ಜೀವಿತ್, ಐಕ್ಯುಎಸಿ ಸಂಚಾಲಕಿ ಸುಷ್ಮಾ ರಾವ್, ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕ ಡಾ.ದಿವ್ಯ ಪ್ರಭು ಇದ್ದರು. ನಿಶ್ಷಿತಾ ಹಾಗೂ ಬಳಗ ಪ್ರಾರ್ಥನೆಗೈದರು. ಶ್ರಿಲಕ್ಷ್ಮೀ ರಾವ್ ಸ್ವಾಗತಿಸಿದರು. ಜೆನಿಫರ್ ವಂದಿಸಿದರು. ಪ್ರಥ್ವಿನಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT