ಕಾರ್ಕಳ: ಇಲ್ಲಿನ ದಾನ ಶಾಲೆಯ ಬಾಹುಬಲಿ ಪ್ರವಚನ ಮಂದಿರದಲ್ಲಿ ತಾಲ್ಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆ ನಡೆಯಿತು.

ವೇದಿಕೆಯ ಅಧ್ಯಕ್ಷ ಉದಯ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಕ್ರಿಯಾಯೋಜನೆ ಅನುಷ್ಠಾನ, ನವ ಜೀವನ ಸಮಿತಿ ಬಲವರ್ಧನೆ, ಮದ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಕುರಿತು ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾಹಿತಿ ನೀಡಿದರು.

ನೂತನ ತಾಲ್ಲೂಕು ವೇದಿಕೆಯ ಅಧ್ಯಕ್ಷರಾಗಿ ವೃಷಭರಾಜ ಕಡಂಬ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ತಾಲ್ಲೂಕಿನ ವಲಯ ಮೇಲ್ವಿಚಾರಕರು ಸಾಧನಾ ವರದಿ ಮಂಡಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಕಮಲಾಕ್ಷ ನಾಯಕ್, ತ್ರಿವಿಕ್ರಮ ಕಿಣಿ, ಹರಿಶ್ಚಂದ್ರ ತೆಂಡುಲ್ಕರ್,ವಲಯ ಕಾರ್ಯದರ್ಶಿ ಗೀತಾ, ಯಶೋದಾ, ಸುಶೀಲಾ, ಬ್ರಿಜೇಶ್, ಶಿವರಾಮ್, ಕಚೇರಿ ಆಡಳಿತ ಪ್ರಬಂಧಕಿ ಸೌಮ್ಯಾ ಉಪಸ್ಥಿತರಿದ್ದರು. ಕ್ಷೇತ್ರ ಯೋಜನಾಧಿಕಾರಿ ಬಾಲಕ್ರಷ್ಣ ಹಿರಿಂಜ ವರದಿ ವಾಚಿಸಿದರು. ವಲಯ ಮೇಲ್ವಿಚಾರಕ ಗಿರೀಶ್ ಸ್ವಾಗತಿಸಿದರು. ದಿನೇಶ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-28-1137039322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.