ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ಗಣಿತನಗರ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಜಿತ್ ಸಿ ಮಣ್ಣಿಕೇರಿ ಮಾತನಾಡಿ, ಮಾತಾ-ಪಿತರನ್ನು ಗೌರವಿಸಿದವರು ಜೀವನದಲ್ಲಿ ಸದಾ ಸಫಲತೆಯನ್ನು ಪಡೆಯುತ್ತಾರೆ ಎಂದರು.

ಸಾಯಿರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ್ ಎಸ್ ಶೆಟ್ಟಿ ಮಾತನಾಡಿ, ನಾವೆಷ್ಟೇ ಶಿಕ್ಷಣ ಪಡೆದು ಪದವೀಧರರಾದರೂ ವ್ಯಕ್ತಿತ್ವದ ಗುಣಮಟ್ಟ ಎನ್ನುವುದು ನಮ್ಮ ಸಂಸ್ಕಾರದಿಂದ ಕೂಡಿರಲು ಸಾಧ್ಯ. ಅಂತಹ ಸಂಸ್ಕಾರಯುತವಾದ ಶಿಕ್ಷಣ ಜ್ಞಾನಸುಧಾದಿಂದ ಲಭಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವೆಂಕಟರಮಣ ದೇವ್ ಎಜುಕೇಶನಲ್ ಅಂಡ್ ಕಲ್ಚರಲ್ ಟ್ರಸ್ಟ್ನ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಮಾತನಾಡಿ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಜತೆಗೆ ಅವರ ಏಳಿಗೆಗೆ ಬೆನ್ನೆಲುಬಾಗಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಪ್ರೋತ್ಸಾಹಿಸುತ್ತಿರುವ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟಿನ ಕಾರ್ಯ ಶ್ಲಾಘನೀಯ ಎಂದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಸೇವಾ ನಿವೃತ್ತ ಗೋಪಾಲ್ ಸುವರ್ಣ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯಲ್ಲಿ 10 ವರ್ಷಗಳ ಸೇವೆ ಸಲ್ಲಿಸಿದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಸಾಧಕರು, ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರನ್ನು ಗೌರವಿಸಲಾಯಿತು.

ಟ್ರಸ್ಟಿನಿಂದ ಈ ಬಾರಿ ₹6,09,887 ಮೊತ್ತದ ಪ್ರೋತ್ಸಾಹಧನ ವಿತರಿಸ ಲಾಯಿತು. ಸಂಸ್ಥೆಯ 41ನೇ ಜ್ಞಾನಸುಧಾ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಟ್ರಸ್ಟಿಗಳಾದ ಸಿ.ಎ.ನಿತ್ಯಾನಂದ ಪ್ರಭು, ಅನಿಲ್ ಕುಮಾರ್ ಜೈನ್, ವಿದ್ಯಾವತಿ ಎಸ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷ ಕಮಲಾಕ್ಷ ನಾಯಕ್, ಪ್ರಾಂಶುಪಾಲ ದಿನೇಶ್ ಎಂ.ಕೊಡವೂರ್, ಉಪಪ್ರಾಂಶುಪಾಲ ಸಾಹಿತ್ಯ ಹಾಗೂ ಇತರರು ಉಪಸ್ಥಿತರಿದ್ದರು.

ಟ್ರಸ್ಟ್ ಅಧ್ಯಕ್ಷ ಸುಧಾಕರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿದರು. ಉಪನ್ಯಾಸಕ ಶರತ್ ಆರ್ ಸಾಧಕ ವಿದ್ಯಾರ್ಥಿಗಳ ಪಟ್ಟಿಯನ್ನು, ಸನ್ಮಾನಿತರ ಪತ್ರವನ್ನು ಸಂತೋಷ್ ನೆಲ್ಲಿಕಾರು ವಾಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-1378673431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.