ಕಾರ್ಕಳ: ಜೈನಾಗಮ ಪದ್ಧತಿಯಂತೆ ಪರಂಪರಾನುಗತವಾಗಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕವು ಈ ಬಾರಿ 2027ರ ಫೆಬ್ರುವರಿ ತಿಂಗಳಿನಲ್ಲಿ ನಡೆಯಲಿದೆ ಎಂದು ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಇಲ್ಲಿನ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕಾರ್ಕಳ ಗೊಮ್ಮಟೇಶ್ವರ ಬೆಟ್ಟದ ಏಕಶಿಲಾ ಗೊಮ್ಮಟೇಶ್ವರ ವಿಗ್ರಹವು ಸರ್ವಧರ್ಮಿಯರ ಸೌಹಾರ್ದ ಬದುಕಿನ ಸುಂದರ ನೆಲೆಬೀಡಾಗಿದ್ದು, ಜೈನಕಾಶಿ ಎಂದೇ ಪ್ರಖ್ಯಾತವಾಗಿದೆ ಎಂದರು.

ಈ ವಿಗ್ರಹವು ಶ್ರವಣಬೆಳಗೊಳದ ಬಳಿಕ ಎರಡನೇ ಉನ್ನತವಾದ ಏಕಶಿಲಾ ವಿಗ್ರಹವಾಗಿದೆ. 42 ಅಡಿ ಎತ್ತರದ ವಿಗ್ರಹವನ್ನು ಕ್ರಿ.ಶ. 1432ರಲ್ಲಿ ಕಾರ್ಕಳದ ಬೈರವರಸ ಮನೆತನದ ಪಾಂಡ್ಯ ರಾಜನು ಲಲಿತಕೀರ್ತಿ ಯತಿಶ್ರೇಷ್ಠರ ಪ್ರೇರಣೆಯಂತೆ ಪ್ರತಿಷ್ಠಾಪಿಸಿದ್ದನು. ಆಗಮೋಕ್ತ ಸಂಪ್ರದಾಯದಂತೆ ಕಾರ್ಕಳದ ಬಾಹುಬಲಿ ಸ್ವಾಮಿಗೆ ಇತ್ತೀಚಿನ ವರ್ಷಗಳಲ್ಲಿ 1954, 1990, 2002 ಮತ್ತು 2015ರಲ್ಲಿ ಮಹಾಮಸ್ತಕಾಭಿಷೇಕ ನಡೆದಿವೆ ಎಂದರು.

ಜೈನಮಠದ ಯತಿ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತಿಯಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದೆ. ಕಾರ್ಕಳ ಕ್ಷೇತ್ರದ ಮೂಲ ಸೌಕರ್ಯಕ್ಕೆ ₹82.37 ಕೋಟಿ ಅಂದಾಜು ವೆಚ್ಚದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

ಏ.19ರಂದು ಬೆಳಿಗ್ಗೆ 10.30ಕ್ಕೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಲಯದ ಉದ್ಘಾಟನೆ ಹಾಗೂ ಮಹಾಸ್ತಕಾಭಿಷೇಕದ ದಿನಾಂಕದ ಘೋಷಣೆಯಾಗಲಿದೆ. ಲಲಿತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ, ಮಹೋ ತ್ಸವ ಸಮಿತಿಯ ಅಧ್ಯಕ್ಷ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು 2027ರ ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆ ಮಾಡಲಿರುವರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ವರ್ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಲಯ ಉದ್ಘಾಟಿಸುವರು ಎಂದು ತಿಳಿಸಿದರು.

ಪ್ರಮುಖರಾದ ಪುಷ್ಪರಾಜ್ ಜೈನ್, ಅರುಣಾ ರಾಜೇಂದ್ರ ಕುಮಾರ್, ಮೋಹನ್ ಪಡಿವಾಳ್, ಪ್ರಭಾತ್ ಕುಮಾರ್, ಅನಂತರಾಜ್ ಪೂವಣಿ, ಸಂಪತ್ ಸಾಮ್ರಾಜ್ಯ, ಸುಧೀರ್ ಪಡಿವಾಳ್, ಕೆ.ಜಯಕೀರ್ತಿ ಕಡಂಬ, ಹೇಮಚಂದ್ರ ಜೈನ್, ಕಾರ್ಯದರ್ಶಿ ಸುನಿಲ್ ಕುಮಾರ್ ಬಜಗೋಳಿ, ಮಹಾವೀರ ಹೆಗ್ಡೆ, ಭರತ್ ಕುಮಾರ್ ಜೈನ್, ಶೀತಲ್ ಜೈನ್, ಸುಭಾಶ್ಚಂದ್ರ ಚೌಟ, ಶಾಂತಿರಾಜ ಜೈನ್, ಮಹೇಂದ್ರ ವರ್ಮಾ ಜೈನ್, ಶಿಶುಪಾಲ ಜೈನ್, ಶಶಿಕಲಾ ಹೆಗ್ಡೆ, ಹರ್ಷಿಣಿ ವಿಜಯರಾಜ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-28-876047147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.