ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿರ್ಲಕ್ಷ್ಯ ಮುಂದುವರಿಸಿದರೆ ಸಿ.ಎಂ. ಮನೆ ಮುಂದೆ ಧರಣಿ: ಸುನೀಲ್‌ ಕುಮಾರ್

Published : 16 ಸೆಪ್ಟೆಂಬರ್ 2024, 15:39 IST
Last Updated : 16 ಸೆಪ್ಟೆಂಬರ್ 2024, 15:39 IST
ಫಾಲೋ ಮಾಡಿ
Comments

ಉಡುಪಿ: ‘ಯಾವುದೇ ಅನುದಾನ ಬಿಡುಗಡೆ ಮಾಡದೆ ಸರ್ಕಾರವು ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿದ್ದು, ಈ ಧೋರಣೆ ಮುಂದುವರಿಸಿದರೆ ಮೂರೂ ಜಿಲ್ಲೆಗಳ ಶಾಸಕರು‌ ಸೇರಿ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಮಾಡಬೇಕಾಗುತ್ತದೆ’ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.

ನಗರದ ಕಿದಿಯೂರು ಹೋಟೆಲ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಲ್ಕೊರೆತಕ್ಕೆ ಪರಿಹಾರ ಹಾಗೂ ರಸ್ತೆಗಳ ದುರಸ್ತಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. 10 ದಿನಗಳೊಳಗೆ ಮುಖ್ಯಮಂತ್ರಿ ಈ ಕುರಿತು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಧರಣಿ ನಡೆಸುತ್ತೇವೆ. ಸರ್ಕಾರ ಉದ್ಧಟತನ ತೋರಿದರೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನಾಂದೋಲನ ಹಮ್ಮಿಕೊಳ್ಳಲಾಗುವುದು ಎಂದರು.

ಈ ಬಾರಿಯ ಮಳೆಗೆ ಉಡುಪಿ ಜಿಲ್ಲೆಯಲ್ಲಿ ₹240 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾಡಳಿತ ವರದಿ ಸಲ್ಲಿಸಿದರೂ ಈ ತನಕ ನಯಾ ಪೈಸೆ ಬಿಡುಗಡೆಯಾಗಿಲ್ಲ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT