ಕಾರ್ಕಳ: ದಕ್ಷಿಣ ಕನ್ನಡ ಜಿಲ್ಲೆ ಕಡಬದ ನೆಲ್ಯಾಡಿ ಗ್ರಾಮದ ಸುದೀಪ್ ರೈ (31) ಎಂಬುವವರು ಕಾರ್ಕಳದ ತನ್ನ ಪತ್ನಿಯ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.

ನೆಲ್ಯಾಡಿಯ ಸುದೀಪ್ ಕಾರ್ಕಳದ ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ಇತ್ತೀಚೆಗಷ್ಟೇ ಮದುವೆಯಾಗಿದ್ದು, ಕಾರ್ಕಳ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿರುವ ಪತ್ನಿ ಮನೆಯಲ್ಲಿ ವಾಸವಿದ್ದರು. ಮೂರು ದಿನಗಳ ಹಿಂದೆ ಸುದೀಪ್ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಪತ್ನಿ, ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಡುಪಿ, ಮಂಗಳೂರಿನ ಆಸ್ಪತ್ರೆಯಲ್ಲೂ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಮಗ ಸುದೀಪ್ ಸಾವಿನ ಕುರಿತು ತಂದೆ ದಾಮೋದರ ಶೆಟ್ಟಿ, ಸೌಮ್ಯಾ ಶೆಟ್ಟಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-28-2090821040

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.