ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಶುರಾಮ ಥೀಂ ಪಾರ್ಕ್‌ ಶೀಘ್ರ ಪೂರ್ಣಗೊಳಿಸಿ: 6 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮನವಿ

Published 6 ಮೇ 2024, 14:27 IST
Last Updated 6 ಮೇ 2024, 14:27 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ಬೈಲೂರು ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡಿ ಎಂದು 6 ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೋಮವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಎರ್ಲಪಾಡಿ, ನೀರೆ, ಬೈಲೂರು, ಪಳ್ಳಿ, ಕುಕ್ಕುಂದೂರು, ಹಿರ್ಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ತಹಶೀಲ್ದಾ‌ರ್ ಡಾ.ಪ್ರತಿಭಾ ಆ‌ರ್. ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಪ್ರವಾಸೋದ್ಯಮ ದೃಷ್ಟಿಯಲ್ಲಿ ಅತಿ ಮಹತ್ವದ್ದೆನಿಸಿದೆ. ಹೀಗಾಗಿ ಬಾಕಿಯಿರುವ ಕಾಮಗಾರಿ ಆರಂಭಿಸಿ ಶೀಘ್ರ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT