ಕಾರ್ಕಳ: ಇಲ್ಲಿನ ಪ್ರವಾಸಿ ಮಂದಿರದ ವಠಾರದಲ್ಲಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಗುರುವಾರ ನಡೆಯಿತು.

ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ಸಂತೋಷ್ ಶೆಟ್ಟಿ ಮಾತನಾಡಿ, ವಾಹನ ಚಾಲಕರು ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಬೇಕು. ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂದರ್ಭ ಕಡ್ಡಾಯವಾಗಿ ಸುರಕ್ಷತಾ ಬೆಲ್ಟ್ ಉಪಯೋಗಿಸಬೇಕು. ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವ ಕಾರ್ಯಕ್ರಮ ಅಗತ್ಯವಿದೆ ಎಂದರು.

ಮಹಾವೀರ ಡ್ರೈವಿಂಗ್ ಸ್ಕೂಲ್ ಮಾಲೀಕ ನೇಮಿರಾಜ ಆರಿಗ, ವಿವೇಕ್ ಡ್ರೈವಿಂಗ್ ಸ್ಕೂಲ್ ಮಾಲೀಕ ಗೋಪಾಲ ಪೈ, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಾಲೀಕ ಶಿವರಾಮ ಹೆಗ್ಡೆ, ಮೂಡುಬಿದಿರೆ ಆಳ್ವಾಸ್ ಕಾಲೇಜ್ ಅಧ್ಯಾಪಕ ಮಂಜುನಾಥ, ವಾಹನ ಚಾಲಕರು ಭಾಗವಹಿಸಿದ್ದರು. ಅಂಬಾ ಡ್ರೈವಿಂಗ್ ಸ್ಕೂಲ್ ಮಾಲೀಕ ಅಂಬಾಪ್ರಸಾದ್ ನಿರೂಪಿಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.