ಕಾರ್ಕಳ: ಇಲ್ಲಿನ ಬಂಡಿಮಠ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಪ್ರಯಾಣದ ಸಂಭ್ರಮಾಚರಣೆ ನಡೆಯಿತು.

ಸರ್ಕಾರಿ ಬಸ್ಗೆ ಬಾಳೆಗಿಡ, ಹೂವಿನ ಹಾರ, ಬಣ್ಣದ ಬಲೂನ್ ಕಟ್ಟಿ ಸಿಂಗರಿಸಲಾಯಿತು. ಮಹಿಳೆಯರು ಶೋಭಾನೆ ಹಾಡಿನ ಮೂಲಕ ಆರತಿ ಮಾಡಿ ಪೂಜಿಸಿದರು. ಚಾಲಕ, ನಿರ್ವಾಹಕರಾದ ಕೇಶವ ಜಿ.ಎಚ್, ಶಿವಪುತ್ರ ಕುಂಬಾರ ಅವರನ್ನು ಸನ್ಮಾನಿಸಲಾಯಿತು.

ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಭೂ ಮಸೂದೆ ಕಾನೂನು, ಕೃಷಿ ನೀರಾವರಿಗೆ ಉಚಿತ ವಿದ್ಯುತ್ ಯೋಜನೆ, ಸಾಲಮೇಳ, ಸಿಇಟಿ ಪರೀಕ್ಷೆ ಮುಂತಾದ ಜನಪರ, ಬಡವರ ಪರವಾದ ಯೋಜನೆಗಳನ್ನು ಕೊಟ್ಟ ಕಾಂಗ್ರೆಸ್, ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುವ ಏಕೈಕ ಪಕ್ಷ ಎಂಬುದನ್ನು ಸಾಬೀತು ಪಡಿಸಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಎರಡು ವರ್ಷಗಳಲ್ಲಿ ಶಕ್ತಿ ಯೋಜನೆಯ ಮೂಲಕ ರಾಜ್ಯದಾದ್ಯಂತ ಮಹಿಳೆಯರು 500 ಕೋಟಿ ಪ್ರಯಾಣ ಮಾಡಿರುವುದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಿಜೆಪಿಗೆ ರಾಜ್ಯದ ಮಹಿಳೆಯರು ನೀಡಿದ ಉತ್ತರವಾಗಿದೆ ಎಂದರು.

ವಕೀಲ ಶೇಖರ ಮಡಿವಾಳ, ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ ಪೂಜಾರಿ ಮಾತನಾಡಿದರು. ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ, ಅನಿತಾ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಸುಧಾಕರ ಶೆಟ್ಟಿ ಮುಡಾರು, ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ, ರೀನಾ ಡಿಸೋಜ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅನಿತಾ ಡಿಸೋಜ ಪಾಲ್ಗೊಂಡಿದ್ದರು. ಗ್ಯಾರಂಟಿ ಸಮಿತಿ ಸದಸ್ಯ ಫಿಲಿಪ್ ಮಸ್ಕರನೇನಸ್ ಸ್ವಾಗತಿಸಿದರು. ಹೇಮಂತ ಆಚಾರ್ಯ ವಂದಿಸಿದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.