ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ | ಯುವಪೀಳಿಗೆ ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕು: ಜಯಕರ್‌ ಶೆಟ್ಟಿ

Last Updated 3 ಡಿಸೆಂಬರ್ 2022, 6:55 IST
ಅಕ್ಷರ ಗಾತ್ರ

ಕಾರ್ಕಳ: ಇಂದಿನ ಯುವ ಪೀಳಿಗೆಯು ರಕ್ತದಾನ, ಸ್ವಚ್ಛತಾ ಕಾರ್ಯಕ್ರಮ, ಶ್ರಮದಾನದಂತಹ ಸೇವೆಗಳ ಮೂಲಕ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಕುಂದಾಪುರದ ಯುವ ರೆಡ್‌ಕ್ರಾಸ್ ರಕ್ತನಿಧಿ ಘಟಕದ ಅಧ್ಯಕ್ಷ ಜಯಕರ್ ಶೆಟ್ಟಿ ಹೇಳಿದರು.

ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಯುವ ರೆಡ್‌ಕ್ರಾಸ್ ಘಟಕವು ಈ ದಿಶೆಯಲ್ಲಿ ಸಫಲವಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಕಿರಣ್. ಎಂ. ಅಧ್ಯಕ್ಷತೆಯನ್ನು ವಹಿಸಿದ್ದರು.

ಯುವ ರೆಡ್‌ಕ್ರಾಸ್ ಘಟಕದ ಖಚಾಂಜಿ ಶಿವರಾಮ್ ಶೆಟ್ಟಿ, ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನದ ವಿಭಾಗ ಮುಖ್ಯಸ್ಥೆ ಹಾಗೂ ಐ.ಕ್ಯೂ.ಎ.ಸಿ ಸಂಯೋಜಕಿ ಪ್ರೊ. ಸುಷ್ಮಾ ರಾವ್ ಕೆ, ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ. ವಿದ್ಯಾಧರ ಹೆಗ್ಡೆ ಎಸ್., ಪ್ರಾಧ್ಯಾಪಕ ಮಂಜುನಾಥ ಬಿ., ಯೋಗೇಶ್ ಡಿ. ಹೆಚ್, ಘಟಕದ ವಿದ್ಯಾರ್ಥಿ ನಾಯಕಿ ರಶ್ಮಿತಾ ಹಾಗೂ ಮುಬಿನಾ ಇದ್ದರು. ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಡಾ.ದಿವ್ಯ ಪ್ರಭು ಪಿ ಸ್ವಾಗತಿಸಿ ನಿರೂಪಿಸಿದರು. ಪ್ರೊ. ಮೈತ್ರಿ ಬಿ. ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT