ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡ್ರೋನ್‌ ಬಳಸಿ ಆರೋಗ್ಯ ವಿತರಣಾ ವ್ಯವಸ್ಥೆಗೆ ಚಾಲನೆ

Published 10 ಏಪ್ರಿಲ್ 2024, 13:37 IST
Last Updated 10 ಏಪ್ರಿಲ್ 2024, 13:37 IST
ಅಕ್ಷರ ಗಾತ್ರ

ಕಾರ್ಕಳ: ಇಲ್ಲಿನ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಡ್ರೋನ್‌ಗಳನ್ನು ಬಳಸಿಕೊಂಡು ವೈಮಾನಿಕ ಸಾರಿಗೆ ಮೂಲಕ ಆರೋಗ್ಯ ವಿತರಣಾ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಲಾಯಿತು.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಜಂಟಿಯಾಗಿ ಈ ಯೋಜನೆ ಆಯೋಜಿಸಿದ್ದವು.

ಡ್ರೋನ್ ಯೋಜನೆ ಉದ್ಘಾಟಿಸಿದ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ವಿಭಾಗದ ಕಾರ್ಯದರ್ಶಿ ಡಾ.ರಾಜೀವ್ ಬಹ್ಲ್ ಮಾತನಾಡಿ, ಆರೋಗ್ಯ ರಕ್ಷಣೆ ವಿತರಣಾ ಉಪಕ್ರಮದ ನವೀನ ವಿಧಾನ ವಿಶೇಷವಾಗಿ ಕಡಿಮೆ ಸಾರಿಗೆ ವ್ಯವಸ್ಥೆಯುಳ್ಳ ಗ್ರಾಮೀಣ ಪ್ರದೇಶಗಳಲ್ಲಿ ಮಾದರಿ (ಸ್ಯಾಂಪಲ್)ಗಳನ್ನು ಸಾಗಿಸಲು ಇರುವ ಸಾರಿಗೆ ತೊಡಕು ನಿವಾರಿಸುವ ಉದ್ದೇಶ ಹೊಂದಿದೆ. ಈ ಯೋಜನೆ ರೋಗ ನಿರ್ಣಯ ಸೇವೆಗಳನ್ನು ಕ್ರಾಂತಿಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.

ಮಾಹೆ ಸಹ ಕುಲಾಧಿಪತಿ ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಡಾ.ಕಾಮಿನಿ ವಾಲಿಯಾ ಡ್ರೋನ್ ಯೋಜನೆಯ ಮಹತ್ವದ ಕುರಿತು ಮಾತನಾಡಿದರು.

ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್, ಐಸಿಎಂಆರ್ ನಿರ್ದೇಶಕ ಡಾ.ಸಂಘಮಿತ್ರ ಪತಿ ಭುವನೇಶ್ವರ್, ಆರೋಗ್ಯ ಸಂಶೋಧನಾ ಇಲಾಖೆ ಜಂಟಿ ಕಾರ್ಯದರ್ಶಿ ಅನು ನಗರ್, ವಿವರಣಾತ್ಮಕ ಸಂಶೋಧನೆ ವಿಭಾಗದ ಡಾ.ಕಾಮಿನಿ ವಾಲಿಯಾ, ಮಾಹೆ ಕುಲಪತಿ ಡಾ.ಎಂ.ಡಿ. ವೆಂಕಟೇಶ್, ಸಹ ಕುಲಪತಿ ಡಾ.ಶರತ್ ಕೆ.ರಾವ್ ಇದ್ದರು. ಐಸಿಎಂಆರ್‌ ವಿಜ್ಞಾನಿ, ಕಾರ್ಯಕ್ರಮ ಅಧಿಕಾರಿ ಡಾ.ಸುನಿಲ್ ಅಗರ್ವಾಲ್ ಸ್ವಾಗತಿಸಿದರು. ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT