ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಕಳ | ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

Published 20 ಆಗಸ್ಟ್ 2024, 14:42 IST
Last Updated 20 ಆಗಸ್ಟ್ 2024, 14:42 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಕಳ ಪುರಸಭೆಯ ಆಶ್ರಯದಲ್ಲಿ ಡಿ.ದೇವರಾಜ ಅರಸು ಅವರ ಜನ್ಮದಿನ ಆಚರಿಸಲಾಯಿತು.

ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು. ನಿಲಯ ಮೇಲ್ವಿಚಾರಕಿ ಜಯಂತಿ ಉಪನ್ಯಾಸ ನೀಡಿದರು. ಕನ್ನಡ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 99.36 ಅಂಕ ಪಡೆದ ಪ್ರತೀಕ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಹಶೀಲ್ದಾರ್ ಪ್ರತಿಭಾ ಆರ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರೀಶ್, ಸುಂದರ್ ಇದ್ದರು. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಂತ ನಾರಾಯಣ ಭಟ್ಕಳ ಸ್ವಾಗತಿಸಿದರು. ವಿನಾಯಕ ಬಾಳಗದ್ದೆ ವಂದಿಸಿದರು. ನಿಲಯ ಮೇಲ್ವಿಚಾರಕಿ ಮೇಘಶ್ರೀ ನಿರೂಪಿಸಿದರು. ‌ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು, ಸಿಬ್ಬಂದಿಯ ಮನರಂಜನಾ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT