ಕಾರ್ಕಳದ ಅಭಯ್ (23) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿ ಬಂಗ್ಲೆಗುಡ್ಡೆ ನಿವಾಸಿ ಅಲ್ತಾಫ್ (34) ಮತ್ತು ಕ್ಸೇವಿಯರ್ ರಿಚರ್ಡ್ ಕ್ವಾಡ್ರಸ್ (35) ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು.
‘ಬಂಧಿತ ಅಭಯ್, ಪ್ರಥಮ ಆರೋಪಿ ಅಲ್ತಾಫ್‌ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.