ಶುಕ್ರವಾರ, ಮಾರ್ಚ್ 31, 2023
22 °C

ಉಡುಪಿ: ಕೊಲ್ಲೂರು, ಕೃಷ್ಣ ಮಠಕ್ಕೆ ರಾಜ್ಯಪಾಲ ತಾವರ್‌ಚಂದ್ ಗೆಹಲೋತ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ರಾಜ್ಯಪಾಲ ತಾವರ್‌ಚಂದ್ ಗೆಹಲೋತ್ ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ರಾಜ್ಯಪಾಲರಿಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ದೇವರಿಗೆ ಆರತಿ ಬೆಳಗಿ, ಬ್ರಹ್ಮಾರ್ಪಣ ನೆರವೇರಿಸಿದರು. ದೇವಾಲಯದ ಆವರಣದಲ್ಲಿರುವ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಚಿನ್ನದ ರಥ ವೀಕ್ಷಿಸಿದರು.

ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಎಸ್‌ಪಿ ಎನ್‌.ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ಇದ್ದರು.

ಬೆಳಿಗ್ಗೆ ಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥ ಸ್ವಾಮೀಜಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ, ಪರ್ಯಾಯ ಮಂಗಲೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು