ಬುಧವಾರ, ಸೆಪ್ಟೆಂಬರ್ 30, 2020
26 °C

ಪ್ರವಾಹ | ರಾಜ್ಯದ 11 ಜಿಲ್ಲೆಗಳಿಗೆ ತಲಾ ₹5 ಕೋಟಿ ಹೆಚ್ಚುವರಿ ಅನುದಾನ: ಆರ್.ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ ₹ 5 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಿದ್ಧವಿದ್ದು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2, 3 ಹಾಗೂ 4ನೇ ಕಂತಿನ ಹಣವನ್ನು ವಾರದೊಳಗೆ ಬಿಡುಗಡೆ ಮಾಡಲಾಗುವುದು. ಗೃಹ ನಿರ್ಮಾಣ ಮಂಡಳಿಗೆ ₹ 300 ಕೋಟಿ ಬಿಡುಗಡೆ ಮಾಡುತ್ತಿದ್ದು, ಹಣ ಬಿಡುಗಡೆ ಸಂಬಂಧ ಎಲ್ಲ ಫಲಾನುಭವಿಗಳಿಗೂ ಸರ್ಕಾರ ಪತ್ರ ಬರೆದು ಮಾಹಿತಿ ನೀಡಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.