ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ಮುಂದುವರಿದ ಧಾರಾಕಾರ ಮಳೆ

Published 6 ಜುಲೈ 2024, 5:59 IST
Last Updated 6 ಜುಲೈ 2024, 5:59 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ ಶನಿವಾರವೂ ಮುಂದುವರಿದಿದ್ದು, ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಶನಿವಾರ ಬೆಳಿಗ್ಗೆ ಎರಡು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ನಗರದ ವಿವಿಧೆಡೆ ರಸ್ತೆಗಳಲ್ಲಿ ಮಳೆ‌ ನೀರು ಸಂಗ್ರಹಗೊಂಡು ವಾಹನ ಸವಾರರು ಪರದಾಡಿದರು.

ಭಾರಿ ಮಳೆಯಿಂದಾಗಿ ಬೆಳಿಗ್ಗೆ ಕೆಲಸಕ್ಕೆ‌ ತೆರಳುವವರಿಗೆ ಕೂಡ ಸಮಸ್ಯೆಯಾಯಿತು.

ಕಾಪು, ಹಿರಿಯಡ್ಕ, ಹೆಬ್ರಿ, ಬ್ರಹ್ಮಾವರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಮಳೆ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT