ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಮೊದಲ ದಿನ 13,235 ವಿದ್ಯಾರ್ಥಿಗಳು ಹಾಜರು, 75 ಗೈರು

ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
Last Updated 31 ಮಾರ್ಚ್ 2023, 15:59 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು ಮೊದಲ ದಿನ ಯಾವುದೇ ಗೊಂದಲಗಳು ಇಲ್ಲದಂತೆ ನಡೆಯಿತು. 55 ಪರೀಕ್ಷಾ ಕೇಂದ್ರಗಳಲ್ಲಿ ಮಾತೃ ಭಾಷೆ ವಿಷಯದಲ್ಲಿ ನಡೆದ ಪರೀಕ್ಷೆಯಲ್ಲಿ 13,235 ವಿದ್ಯಾರ್ಥಿಗಳು ಹಾಜರಾಗಿದ್ದರು. 75 ಮಂದಿ ಗೈರಾಗಿದ್ದರು.

ಬೆಳಿಗ್ಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಉಡುಪಿಯ ಬೋರ್ಡ್ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಡಿಡಿಪಿಐ ಗಣಪತಿ, ಡಯಟ್‌ ಅಧಿಕಾರಿ ಡಾ.ಅಶೋಕ್ ಕಾಮತ್ ಇದ್ದರು.

ಮೊದಲ ದಿನದ ಪರೀಕ್ಷೆಯಲ್ಲಿ ಬೈಂದೂರು ವಲಯದಿಂದ 1931 ವಿದ್ಯಾರ್ಥಿಗಳು ಹಾಜರಾಗಿದ್ದರೆ ನಾಲ್ವರು ಪರೀಕ್ಷೆಗೆ ಬಂದಿರಲಿಲ್ಲ. ಕುಂಧಾಪುರ ವಲಯದಿಂದ 2515 ಹಾಜರು 12 ಗೈರು, ಕಾರ್ಕಳ ವಲಯದಿಂದ 2529 ಹಾಜರು 2 ಗೈರು, ಉಡುಪಿ ಉತ್ತರ ವಲಯದಿಂದ 2668 ಹಾಜರು, 18 ಗೈರು, ಉಡುಪಿ ದಕ್ಷಿಣ ವಲಯದಿಂದ 3444 ಹಾಜರು, 13 ವಿದ್ಯಾರ್ಥಿಗಳು ಗೈರಾಗಿದ್ದರು.

ಈ ಬಾರಿ ‍ಪರೀಕ್ಷೆಗೆ 13,129 ಫ್ರೆಷರ್, 181 ರಿಪಿಟರ್ಸ್‌ ಬರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ. ಇವರಲ್ಲಿ 174 ಖಾಸಗಿ ವಿದ್ಯಾರ್ಥಿಗಳು ಇದ್ದಾರೆ. ಮಾರ್ಚ್ 31 ರಿಂದ ಏ.15 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮಗಳು ನಡೆಯದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಸ್ಮಾರ್ಟ್‌ ವಾಚ್‌ ಸೇರಿದಂತೆ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಬಳಕೆಗೆ ನಿರ್ಬಂಧ ಹಾಕಲಾಗಿದೆ.

ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಉಚಿತವಾಗಿ ಕೆಸ್‌ಆರ್‌ಟಿಸಿ ಬಸ್‌ಗಳಲ್ಲಿ ಬರಲು ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT