ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟಪಾಡಿ: ಕರಾಟೆ ಚಾಂಪಿಯನ್‍ಷಿಪ್

Last Updated 8 ನವೆಂಬರ್ 2022, 6:30 IST
ಅಕ್ಷರ ಗಾತ್ರ

ಶಿರ್ವ: ಉಡುಪಿಯ ಮಾಬುನಿಕೆನ್‌ಯಿ ಶಿಟೊ ರಿಯು ಕರಾಠೆ ಸ್ಕೂಲ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‍ಷಿಪ್ ಕಟಪಾಡಿ ಸಮೀಪದ ಕುರ್ಕಾಲು ಥಂಡರ್ಸ್ ಗ್ರ್ಯಾಂಡ್‌ ಬೇ ಸಭಾಂಗಣದಲ್ಲಿ ಈಚೆಗೆ ನಡೆಯಿತು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಎ. ಸುವರ್ಣ ಚಾಂಪಿಯನ್‌ಷಿಪ್‌ಗೆ ಚಾಲನೆ ನೀಡಿ ‘ಗ್ರಾಮೀಣ ಪ್ರತಿಭೆಗಳ ಆತ್ಮರಕ್ಷಣೆಗೆ ಕರಾಟೆ ಉಪಯೋಗಿಯಾಗಿದೆ. ಆತ್ಮರಕ್ಷಣೆಯ ಜೊತೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಕರಾಟೆಪಟುಗಳು ಪ್ರಯತ್ನಿಸಬೇಕು’ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಕೇಸರಿ ಯುವರಾಜ್, ಸಂಸ್ಥೆಯ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜೇಶ್ ಕುಂದರ್, ಉದ್ಯಮಿಗಳಾದ ಯೋಗೀಶ್ ಎಸ್.ಕೋಟ್ಯಾನ್, ಸುಭಾಸ್ ಎಂ.ಸಾಲ್ಯಾನ್, ಮಧುಸೂಧನ್ ಮಲ್ಪೆ, ಬಿಲ್ಲವ ಪರಿಷತ್ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ರಾಜ್ಯ ಕರಾಟೆ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಲಕ್ಷ್ಮೀನಾರಾಯಣ ಇದ್ದರು.

ಸಂಸ್ಥೆಯ ಕಾರ್ಯಾಧ್ಯಕ್ಷ ರವಿ ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯತೀಶ್ ಕೋಟ್ಯಾನ್ ಮಟ್ಟು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT