ಶಿರ್ವ: ಕಟಪಾಡಿ ಮೀನು ಮಾರುಕಟ್ಟೆಗೆ ಶನಿವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೀನುಗಾರ ಮಹಿಳೆಯರೊಂದಿಗೆ ಕಟ್ಟಡದಲ್ಲಿನ ಕುಂದು ಕೊರತೆಯ ಬಗ್ಗೆ ಚರ್ಚಿಸಿದರು.

ಮೀನು ಮಾರುಕಟ್ಟೆಯ ಕೊಳಚೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮತ್ತು ಮೀನು ಮಾರುಕಟ್ಟೆಯ ಕಟ್ಟಡ ಮೂಲ ಸೌಕರ್ಯ ಒದಗಿಸುವಂತೆ ಮಹಿಳೆಯರು ಮನವಿ ಮಾಡಿದರು. ಬಳಿಕ ಪ್ರತಿಕ್ರಿಯಿಸಿದ ಶಾಸಕರು ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಿಲ್ಪಾ ಜಿ.ಸುವರ್ಣ, ಕಟಪಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್, ಸ್ಥಳೀಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-1047234211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.