ಶಿರ್ವ: ಕಟಪಾಡಿ ಎಸ್ವಿಕೆ ಮತ್ತು ಎಸ್ವಿಎಸ್ ಹಿರಿಯ ಪ್ರಾಥಮಿಕ ಶಾಲೆಗಳ ಪ್ರಾರಂಭೋತ್ಸವ ಕಟಪಾಡಿ ಎಸ್ವಿಎಸ್ ವಿದ್ಯಾವರ್ಧಕ ಸಂಘದ ಸಂಚಾಲಕ ಕೆ. ಸತ್ಯೇಂದ್ರ ಪೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಸ್ಥೆಗಳಿಗೆ ಹೊಸದಾಗಿ ಸೇರ್ಪಡೆ ಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ವೇದಿಕೆಗೆ ಆಹ್ವಾನಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಸಂಚಾಲಕ ಕೆ. ಸತ್ಯೇಂದ್ರ ಪೈ ಮಾತ ನಾಡಿ, ಸಂಸ್ಥೆಗಳ ಮೇಲೆ ಅಭಿಮಾನವಿರಿಸಿ ವಿಶ್ವಾಸದಿಂದ ಮಕ್ಕಳನ್ನು ಸೇರ್ಪಡೆಗೊಳಿಸಿದವರಿಗೆ ನಿರಾಸೆಯಾಗದಂತೆ ನೋಡಿ, ಉತ್ತಮ ಶಿಕ್ಷಣವನ್ನು ನೀಡಿ ಅವರ ಜೀವನಕ್ಕೆ ಬೇಕಾದ ಅಡಿಪಾಯ ನಿರ್ಮಿಸುವುದಾಗಿ ಭರವಸೆ ನೀಡಿದರು.

ಶಾಲಾ ಆಡಳಿತ ಮಂಡಳಿ ಸದಸ್ಯರಾದ ಬಿ.ಸಿ. ಪೈ, ಶ್ರೀನಿವಾಸ ಕಿಣಿ, ವೆಂಕಟರಮಣ ಭಟ್, ನಿತ್ಯಾನಂದ ಶೆಣೈ, ಗಣೇಶ್ ಕಿಣಿ, ಆಡಳಿತಾಧಿಕಾರಿ ಸುಧಾಕರ್ ಬ್ರಹ್ಮಾವರ್, ಶಾಲಾ ಮುಖ್ಯಶಿಕ್ಷಕಿ ಸುಜಾ ಡಿಸೋಜ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಿಯಾ ಶೆಣೈ, ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಆಶಾಲತಾ ಇದ್ದರು. ಶಾಲಾ ಶೈಕ್ಷಣಿಕ ಸಲಹೆಗಾರ ದೇವೇಂದ್ರ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ದೀಪಾ ಅಡಿಗ ವಂದಿಸಿದರು. ಶಿಕ್ಷಕಿಯರಾದ ರೂಬಿ, ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-512585604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.