ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ 'ನಾಗಶ್ರೀ ಕಾವ್ಯ ಪ್ರಶಸ್ತಿ'

ಉಡುಪಿ: ತುಮಕೂರಿನ ನಾಗಶ್ರೀ ಪ್ರತಿಷ್ಠಾನ ನೀಡುವ 2021ನೇ ಸಾಲಿನ ನಾಗಶ್ರೀ ಕಾವ್ಯ ಪ್ರಶಸ್ತಿ ಉಡುಪಿಯ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅವನು ಹೆಣ್ಣಾಗಬೇಕು’ ಕವನ ಸಂಕಲನಕ್ಕೆ ದೊರಕಿದೆ.
ಪ್ರಶಸ್ತಿಯು ₹ 5000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಾತ್ಯಾಯಿನಿ ಕುಂಜಿಬೆಟ್ಟು ಪ್ರಸ್ತುತ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ತುಮಕೂರು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಶೀಘ್ರ ನಡೆಯಲಿದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕರಾದ ಎಚ್.ಡಿ.ತೇಜಾವತಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.