ಕಾಪು (ಪಡುಬಿದ್ರಿ): ಬಿಜೆಪಿ ಕಾಪು ಮಂಡಲದ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಮೂರು ದಿನಗಳ ಕಾಲ ಕಾಪು ಬೀಚ್ನಲ್ಲಿ ಹಮ್ಮಿಕೊಂಡಿರುವ ಕಡಲ ಪರ್ಬದ ಆಹಾರ ಮೇಳಕ್ಕೆ ಚಾಲನೆ ನೀಡಲಾಯಿತು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮೂರು ದಿನಗಳ ಕಾಪು ಕಡಲಪರ್ಬದಲ್ಲಿ ಬೀಚ್ ಉತ್ಸವ, ಖಾದ್ಯ ಮೇಳ, ಸಾಂಸ್ಕೃತಿಕ ಉತ್ಸವ ಹಾಗೂ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಕ್ಷದ ಆದೇಶದಂತೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ಅಟಲ್ ಬಿಹಾರಿ ವಾಜಪೇಯಿ ಅವರ ಕುರಿತಾಗಿ ನಾ ಕಂಡಂತೆ ಅಟಲ್ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಯನ್ನು ಗಣ್ಯರು ಉದ್ಘಾಟಿಸಿದರು. ಸ್ಪರ್ಧೆಗಳಲ್ಲಿ ಹಲವರು ಪಾಲ್ಗೊಂಡಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಬಿಜೆಪಿ ಕ್ಷೇತ್ರಾಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಮುಖರಾದ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ನಯನಾ ಗಣೇಶ್, ಜಿಯಾನಂದ ಹೆಗ್ಡೆ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಕಾಂತ್ ನಾಯಕ್, ವಿವಿಧ ಸ್ತರದ ಜನಪ್ರತಿನಿಧಿಗಳು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಡಲಪರ್ಬಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಕಾಪು ಕಡಲ ಪರ್ಬ ಸಮಿತಿಯ ಗೌರವಾಧ್ಯಕ್ಷ ಲಾಲಾಜಿ ಆರ್. ಮೆಂಡನ್ ವಹಿಸಿದ್ದರು.

ಎರಡನೇ ದಿನವಾದ ಶನಿವಾರ ನೇತ್ರ ತಪಾಸಣೆ, ದಂತ ಚಿಕಿತ್ಸಾ ಶಿಬಿರ, ಕನ್ನಡಕ ವಿತರಣೆ ನಡೆಯಲಿದೆ. ಹಗ್ಗಜಗ್ಗಾಟ, ಮರಳು ಶಿಲ್ಪ ರಚನೆ ಸ್ಪರ್ಧೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.