ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕೆಸರು ಗದ್ದೆ ರೈತರ ಬದುಕಿನ ಸಂಕೇತ’

Published : 4 ಆಗಸ್ಟ್ 2024, 5:50 IST
Last Updated : 4 ಆಗಸ್ಟ್ 2024, 5:50 IST
ಫಾಲೋ ಮಾಡಿ
Comments

ಉಡುಪಿ: ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ವಿಜಯ ಬಲ್ಲಾಳ್ ಹೇಳಿದರು.

ಯುವಕ ಮಂಡಲ, ಹಿರಿಯರ ವೇದಿಕೆ ಅಂಬಲಪಾಡಿ ಇದರ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಂಬಲಪಾಡಿ ಬೀಡು ಮಾರ್ಗ ಸೀತಾರಾಮ ಶೆಟ್ಟಿಯವರ ಗದ್ದೆಯಲ್ಲಿ ನಡೆದ ಕೆಸರು ಗದ್ದೆ ಕ್ರೀಡಾ ಕೂಟ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕೃತಿಯಲ್ಲಿ ಮಣ್ಣಿಗೆ ಬಹಳಷ್ಟು ಮಹತ್ವವಿದೆ. ಮನುಷ್ಯನಿಗೂ ಮಣ್ಣಿಗೂ ಅವಿನಾಭಾವ ಸಂಬಂಧ. ಉಸಿರಾಟಕ್ಕೆ ಆಮ್ಲಜನಕ ಕೊಡುವ ಮರ ಗಿಡ ಸಸ್ಯಗಳಿಗೆ ಮಣ್ಣು ಬೇಕು ಎಂದರು.

ಅಂಬಲಪಾಡಿ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆಷಾಢ ಮಾಸದ ಕಷ್ಟದ ಬದುಕು ಮತ್ತು ಆಚರಣೆಗಳ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಕೆಸರ್ದ ಗೊಬ್ಬು ಕಾರ್ಯಕ್ರಮ ಸಕಾಲಿಕ ಎಂದರು.

ಹಿರಿಯರ ವೇದಿಕೆ ಅಧ್ಯಕ್ಷ ಹರೀಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಅಂಬಲಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಸೋಮನಾಥ್ ಬಿ.ಕೆ., ಉದ್ಯಮಿ ವಿಶ್ವನಾಥ್ ಹೆಗ್ದೆ ಮಾತನಾಡಿದರು.

ಅಂಬಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಶೆಟ್ಟಿ, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಯುವಕ ಮಂಡಲ ಹಿರಿಯರ ವೇದಿಕೆಯ ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ, ಸೀತಾರಾಮ ಶೆಟ್ಟಿ, ಅಂಬಲಪಾಡಿ ಉಮಾಮಹೇಶ್ವರ ಭಜನಾ ಮಂದಿರದ ಅಧ್ಯಕ್ಷ ಭರತ್ ರಾಜ್ ಕೆ.ಎನ್., ವಿಶ್ವಕರ್ಮ ಸಂಘ ಅಂಬಲಪಾಡಿ ಅಧ್ಯಕ್ಷ ಜಗದೀಶ್ ಆಚಾರ್ಯ ಕಪ್ಪೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜೇಶ್ ಸುವರ್ಣ, ಭಾರತಿ ಭಾಸ್ಕರ್ ಭಾಗವಹಿಸಿದ್ದರು.

ಯೋಗೀಶ್ ಕೊಳಲಗಿರಿ, ಪ್ರಶಾಂತ್ ಕೆ.ಎಸ್. ಮತ್ತು ಅಜಿತ್ ಕಪ್ಪೆಟ್ಟು ನಿರೂಪಿಸಿದರು. ನಚಿಕೇತ್ ಶೆಟ್ಟಿಗಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT