ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾದಿ ದೇಶದ ಸ್ವಾಭಿಮಾನದ ಸಂಕೇತ

ಕಾಪುವಿನಲ್ಲಿ ಖಾದಿ ಮಾರಾಟ ಸ್ಟಾಲ್ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ
Last Updated 1 ಅಕ್ಟೋಬರ್ 2022, 4:36 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಖಾದಿ ಸ್ವಾಭಿಮಾನದ ಸಂಕೇತವಾಗಿದೆ. ಖಾದಿ ಉದ್ಯಮಕ್ಕೆ ಪ್ರೋತ್ಸಾಹ ನೀಡುವುದರಿಂದ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಪ್ರಯೋಜನವಾಗುತ್ತದೆ ಎಂದು ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಕಾಪು ಪೇಟೆಯಲ್ಲಿ ನಡೆದ ಖಾದಿ ಮಾರಾಟ ಸ್ಟಾಲ್- ಖಾದಿ ಮೇಳವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಪ್ರಜೆಗಳು ವರ್ಷಕ್ಕೆ ಒಂದು ಜೋಡಿ ಖಾದಿ ಬಟ್ಟೆ ಖರೀದಿಸಿದರೆ ₹ 135 ಕೋಟಿ ಖರೀದಿ ನಡೆದಂತಾಗುತ್ತದೆ. ಇಂತಹ ಕಾರ್ಯಕ್ರಮದಿಂದ ಖಾದಿಯನ್ನು ಕೊಂಡುಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ. ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸ್ವಾಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದು, ರಸಗೊಬ್ಬರ ಸಹಿತ ಅಗತ್ಯ ವಸ್ತುಗಳ ಉತ್ಪಾದನೆಗೆ ಒತ್ತು ನೀಡುತ್ತಿದೆ’ ಎಂದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ನಯನಾ ಗಣೇಶ್, ಮೈಸೂರ್ ಇಲೆಕ್ಟ್ರಿಕಲ್ ಅಂಡ್‌ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಶ್ರೀಶ ನಾಯಕ್, ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಖಾದಿ ಮೇಳದ ಸಂಚಾಲಕ ಅನಿಲ್ ಕುಮಾರ್, ಸಹ ಸಂಚಾಲಕ ರತ್ನಾಕರ ಶೆಟ್ಟಿ, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಉದಯ ಶೆಟ್ಟಿ, ಕಾಪು ನಗರ ಅಧ್ಯಕ್ಷ ಸಂದೀಪ್ ಶೆಟ್ಟಿ ಕಲ್ಯ, ಪ್ರಮುಖರಾದ ಶಿಲ್ಪಾ ಸುವರ್ಣ, ಗಂಗಾಧರ ಸುವರ್ಣ, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ಕೇಸರಿ ಯುವರಾಜ್, ಪವಿತ್ರಾ ಶೆಟ್ಟಿ, ಅನಿಲ್ ಶೆಟ್ಟಿ ಇದ್ದರು.

ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಕಾಪು ಪೇಟೆಯಲ್ಲಿ ನಡೆದ ಖಾದಿ ಮಾರಾಟ ಸ್ಟಾಲ್- ಖಾದಿ ಮೇಳ ಉದ್ಘಾಟಿಸಿದ ಸಚಿವೆ ಶೋಭಾ ಕರಂದ್ಲಾಜೆ ತನಗೆ ಇಷ್ಟವಾದ ಎರಡು ಸೀರೆಯನ್ನು ಖರೀಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT