ಶುಕ್ರವಾರ, ಅಕ್ಟೋಬರ್ 23, 2020
28 °C

ಉಡುಪಿ: ಕಿಶನ್ ಹೆಗ್ಡೆ ಕೊಲೆ ಪ್ರಕರಣ, ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಹಿರಿಯಡ್ಕ ಪೇಟೆಯಲ್ಲಿ ಸೆ.24ರಂದು ನಡೆದ ಉದ್ಯಮಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಶುಕ್ರವಾರ ಸುರತ್ಕಲ್ ಬಳಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಕಾಟಿಪಳ್ಳದ ಸಚಿನ್‌, ಅಕ್ಷಯ್ ಶೆಟ್ಟಿಗಾರ್, ಸಂಚಿತ್ ಪ್ರಧಾನ್ ಹಾಗೂ 62ನೇ ತೋಕೂರಿನ ಚೇತನ್‌ನನ್ನು ಬಂಧಿಸಿ, ಮೂರು ಕಾರು, 2 ಬೈಕ್‌ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಸಚಿನ್ ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಕೊಲೆ, ಕೊಲೆ ಯತ್ನ, ಸುಲಿಗೆ, ಅಪಹರಣ, ಹಲ್ಲೆ ಹಾಗೂ ಇಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಹ್ಮಾವರ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ, ಎಎಸ್‌ಐ ಕೃಷ್ಣಪ್ಪ, ಸಿಬ್ಬಂದಿ ಪ್ರದೀಪ್ ನಾಯಕ್‌, ವಾಸುದೇವ, ಗಣೇಶ, ರವೀಂದ್ರ ಚಾಲಕ ಶೇಖರ್, ಬ್ರಹ್ಮಾವರ ಪಿಎಸ್‌ಐ ರಾಘವೇಂದ್ರ, ಸಿಬ್ಬಂದಿ ದಿಲೀಪ್‌, ಚಾಲಕ ಅಣ್ಣಪ್ಪ, ಡಿಸಿಐಬಿ ಎಎಸ್‌ಐ ರವಿಚಂದ್ರ, ಹಿರಿಯಡ್ಕ ಠಾಣೆ ಸಿಬ್ಬಂದಿ ಹರೀಶ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈಚೆಗೆ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈಗ ಬಂಧಿತರ ಸಂಖ್ಯೆ 9ಕ್ಕೆ ಏರಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು