ಮಂಗಳವಾರ, ಜುಲೈ 27, 2021
25 °C

ಉಡುಪಿ: ಪೂರ್ಣ ತೆರೆಯಲಿದೆ ಕೆಎಂಸಿ ಒಪಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಯಲ್ಲಿ ಜೂನ್ 15 ರಿಂದ ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ಎಲ್ಲ ಹೊರರೋಗಿಗಳ ವಿಭಾಗಗಳ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಆಸ್ಪತ್ರೆಗೆ ಭೇಟಿನೀಡುವವರು ಹೊರಾಂಗಣದಲ್ಲಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಲಾಗುವುದು. ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯ ಮಾಸ್ಕ್ ಧರಿಸಿರಬೇಕು. ರೋಗಿ ಜತೆ ಒಬ್ಬ ಸಹಾಯಕರಿಗೆ ಮಾತ್ರ ಅನುಮತಿ ಇದೆ.

ಎಲ್ಲ ಮಾಹಿತಿ ಕೇಂದ್ರಗಳು ಸಹ ಸೋಮವಾರದಿಂದ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ನೋಂದಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು